ಮಂಗಳವಾರ, ಮೇ 17, 2022
27 °C

ಕಲುಷಿತ ನೀರು:ಕೈದಿಗಳು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಲುಷಿತ ನೀರು ಕುಡಿದ ಪರಿಣಾಮ ಇಪ್ಪತ್ತಕ್ಕೂ ಅಧಿಕ ವಾಂತಿ- ಭೇದಿ ಮಾಡಿಕೊಂಡು ಅಸ್ವಸ್ಥರಾದ ಘಟನೆ ಪರಪ್ಪನಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಗುರುವಾರ ನಡೆದಿದೆ.ಬೆಳಿಗ್ಗೆ ತಿಂಡಿ ತಿಂದು ನೀರು ಕುಡಿದ ನಂತರ ಕೈದಿಗಳು ವಾಂತಿ ಮಾಡಿಕೊಂಡರು. ಆ ನಂತರ ಕೆಲವರಿಗೆ ಭೇದಿ ಸಹ ಆಗಿ ಅಸ್ವಸ್ಥಗೊಂಡರು. ಕೂಡಲೇ ಎಲ್ಲರಿಗೂ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಯಿತು.

 ಕಲುಷಿತ ನೀರಿನಿಂದ ಈ ರೀತಿ ಆಗಿದೆ ಎಂದು ಗೊತ್ತಾಗಿದೆ.ಎಲ್ಲ ಕೈದಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿ ಬಿಸಿ ಮಾಡಿದ ನೀರು ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಕೈದಿಗಳೂ ಸುಧಾರಿಸಿಕೊಂಡಿದ್ದಾರೆ. ಅವರ ಆರೋಗ್ಯ ಸ್ಥಿತಿ ಚೆನ್ನಾಗಿದೆ. ಶುದ್ಧ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.