ಶನಿವಾರ, ಡಿಸೆಂಬರ್ 14, 2019
22 °C

ಕಲ್ಮಠ ವಿರೂಪಾಕ್ಷ ಶಿವಾಚಾರ್ಯರ ಪುಣ್ಯಾರಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲ್ಮಠ ವಿರೂಪಾಕ್ಷ ಶಿವಾಚಾರ್ಯರ ಪುಣ್ಯಾರಾಧನೆ

ಮಾನ್ವಿ: ಪಟ್ಟಣದ ಮುಕ್ತಗುಚ್ಛ ಬೃಹನ್ಮಠ ಕಲ್ಮಠದ ಲಿಂಗ್ಯೆಕ್ಯ ಗುರು ವಿರೂಪಾಕ್ಷ ಶಿವಾಚಾರ್ಯ ಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಂಗವಾಗಿ ಕಲ್ಮಠ ವಿದ್ಯಾಸಂಸ್ಥೆಯ ಕಾಲೇಜು ಆವರಣದಿಂದ ಕಲ್ಮಠದವರೆಗೆ ವಿರೂಪಾಕ್ಷ ಶಿವಾಚಾರ್ಯ ಸ್ವಾಮಿಗಳ ಭಾವಚಿತ್ರದ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ವಿವಿಧ ಕಲಾತಂಡಗಳು, ವಾದ್ಯಮೇಳ ಹಾಗೂ ಭಜನಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಪಂಪಾವಿರೂಪಾಕ್ಷೇಶ್ವರ ಕಲ್ಮಠ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಗಳು, ಪ್ರಯೋಗಾಲಯಗಳು ಹಾಗೂ ಗ್ರಂಥಾಲಯದ ಉದ್ಘಾಟನೆ ನೆರವೇರಿಸಲಾಯಿತು.ಮೆರವಣಿಗೆ ನಂತರ ಕಲ್ಮಠದ ಗುರುಭವನದಲ್ಲಿ ಧಾರ್ಮಿಕ ಸಭೆ ನಡೆಯಿತು. ಕಲ್ಮಠದ ಪೀಠಾಧ್ಯಕ್ಷ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ತುಂಗಭದ್ರಾ ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ರಾಜ್ಯ ಖಾದಿ ಮಂಡಳಿ ಅಧ್ಯಕ್ಷ ಹರವಿ ಶಂಕರಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಾ ವೆಂಕಟಪ್ಪ ನಾಯಕ, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ ನಾಯಕ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಲ್ಲನಗೌಡ ನಕ್ಕುಂದಿ, ನಯೋಪ್ರಾ ಅಧ್ಯಕ್ಷ ಉಮೇಶ ಸಜ್ಜನ್,  ಪಟ್ಟಣ ಸಹಕಾರ ಬ್ಯಾಂಕಿನ ಅಧ್ಯಕ್ಷ ಆರ್.ತಿಮ್ಮಯ್ಯ ಶೆಟ್ಟಿ, ಪುರಸಭೆ ಪ್ರತಿಪಕ್ಷ ನಾಯಕ ರಾಜಾ ಮಹೇಂದ್ರ ನಾಯಕ, ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀಧರ ದೊಡ್ಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಗುಲ್ಬರ್ಗ ವಿಭಾಗೀಯ ಉಪಾಧ್ಯಕ್ಷ ಎ.ಬಾಲಸ್ವಾಮಿ ಕೊಡ್ಲಿ, ವಕೀಲರ ಸಂಘದ ಅಧ್ಯಕ್ಷ ಶೇಖರಪ್ಪ ಪಾಟೀಲ್, ಡಾ.ಎಮ್.ಎಲ್.ಪಾಟೀಲ್, ಟಿಎಪಿಸಿಎಮ್‌ಎಸ್ ಅಧ್ಯಕ್ಷ ಎಸ್. ತಿಮ್ಮಾರೆಡ್ಡಿ ಭೋಗಾವತಿ, ಎ.ಬಿ. ಉಪ್ಪಳಮಠ ವಕೀಲ, ಡಾ.ಬಸವಪ್ರಭು ಪಾಟೀಲ್, ಕೃಪಾಸಾಗರ ಪಾಟೀಲ್, ಕಲ್ಮಠ ವಿದ್ಯಾಸಂಸ್ಥೆಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಎಮ್. ಶಾಂತಯ್ಯ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)