ಭಾನುವಾರ, ಮೇ 16, 2021
23 °C

ಕಲ್ಲಿದ್ದಲು ಆಮದಿಗೆ ಚಿಂತನೆ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು:  ಕೇಂದ್ರ ಸರ್ಕಾರವು ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕಕ್ಕೆ ಕಲ್ಲಿದ್ದಲು ಪೂರೈಕೆಗೆ ಅಸಹಕಾರ ಮುಂದುವರಿಸಿದರೆ ವಿದೇಶದಿಂದ ಕಲ್ಲಿದ್ದಲು ತರಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಹೇಳಿದರು.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕದ ಹಳೆಯದಾಗಿದೆ. ಇದರಲ್ಲಿ ಮೇಲಿಂದ ಮೇಲೆ ತಾಂತ್ರಿಕ ದೋಷ ಕಂಡುಬರುತ್ತಿದೆ. ಕೇಂದ್ರ ಸರ್ಕಾರದ ಅಸಹಕಾರದಿಂದಾಗಿ ಕಲ್ಲಿದ್ದಲು ಪೂರೈಕೆಯಲ್ಲಿ ತೊಂದರೆಯಾಗಿ ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.ರಸ್ತೆ ಸುಧಾರಣೆಗೆ 1100 ಕೋಟಿ:  ಸುವರ್ಣ ಗ್ರಾಮ ಯೋಜನೆ ಹಾಗೂ ರಸ್ತೆಗಳಲ್ಲಿನ ಗುಂಡಿಗಳ ಮುಚ್ಚಲು ರಾಜ್ಯ ಸರ್ಕಾರ 1100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಮೂರು ತಿಂಗಳಲ್ಲಿ ರಾಜ್ಯದ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.