ಕಲ್ಲಿದ್ದಲು ಕೊರತೆ; ವಿದ್ಯುತ್ ಉತ್ಪಾದನೆ ಕುಂಠಿತ: ಫಿಕ್ಕಿ
ನವದೆಹಲಿ (ಪಿಟಿಐ): ಕಲ್ಲಿದ್ದಲು ಮತ್ತು ಇಂಧನ ಕೊರತೆಯಿಂದಾಗಿ ದೇಶದ ವಿದ್ಯುತ್ ಉತ್ಪಾದನೆ ಕ್ಷೇತ್ರದಲ್ಲಿ ಸುಮಾರು ರೂ. 1 ಲಕ್ಷ ಕೋಟಿಗಳಷ್ಟು ಮೊತ್ತದ ಹೂಡಿಕೆ ನೆನೆಗುದಿಗೆ ಬಿದ್ದಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ವರದಿ ತಿಳಿಸಿದೆ.
ವಿದ್ಯುತ್ ಉತ್ಪಾದನೆ ಕ್ಷೇತ್ರದ ಭಾಗಶಃ ಹೂಡಿಕೆಗಳು ಸ್ಥಗಿತಗೊಂಡಿವೆ. ಇದರ ಜತೆಗೆ, ಕಲ್ಲಿದ್ದಲು ಮತ್ತು ಅನಿಲ ಸಂಪರ್ಕ ಕೊರತೆಯಿಂದ 25 ಸಾವಿರ ಮೆಗಾವಾಟ್ ಸಾಮರ್ಥ್ಯದ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳೂ ಕಾರ್ಯನಿರ್ವಹಿಸುತ್ತಿಲ್ಲ ನಿಲ್ಲಿಸಿದೆ ಎಂದು `ಫಿಕ್ಕಿ~ ಹೇಳಿದೆ. ಕಲ್ಲಿದ್ದಲು ಪೂರೈಕೆ ಸಮಪರ್ಕವಾಗಿ ಇಲ್ಲದ ಕಾರಣ ಹಲವು ವಿದ್ಯುತ್ ಉತ್ಪಾದನಾ ಘಟಕಗಳು ತೀವ್ರ ಸಮಸ್ಯೆ ಎದುರಿಸುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇಂಧನ ಸಚಿವಾಲಯವು 12ನೇ ಪಂಚವಾರ್ಷಿಕ ಯೋಜನಾ ಅವಧಿಯಲ್ಲಿ ಹೆಚ್ಚುವರಿಯಾಗಿ 78 ಸಾವಿರ ಮೆಗಾ ವಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.