ಬೆಂಗಳೂರು: ಹೋಟೆಲ್ ಕಾರ್ಮಿಕರು ಸಹೋದ್ಯೋಗಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಕೆ.ಆರ್.ಪುರ ಮುಖ್ಯರಸ್ತೆಯ ಶಿವಕೃಷ್ಣ ಹೋಟೆಲ್ ಮುಂಭಾಗ ಸೋಮವಾರ ಮಧ್ಯರಾತ್ರಿ ನಡೆದಿದೆ. ತಮಿಳುನಾಡು ಮೂಲದ ದೊರೆ (40) ಕೊಲೆಯಾದವರು. ಅವರು ಶಿವಕೃಷ್ಣ ಹೋಟೆಲ್ನಲ್ಲಿ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರು.

ದೊರೆ ಮತ್ತು ಅದೇ ಹೋಟೆಲ್ನಲ್ಲಿ ಕೆಲಸ ಮಾಡುವ ಇತರೆ ಕಾರ್ಮಿಕರು ರಾತ್ರಿ ಮದ್ಯಪಾನ ಮಾಡಿದ್ದರು. ಈ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಅವರ ನಡುವೆ ಮಾತಿನ ಚಕಮಕಿ ನಡೆದು, ಇತರೆ ಕಾರ್ಮಿಕರು ದೊರೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ: ಇಬ್ಬರ ಸಾವು
ನಗರದ ಬ್ಯಾಟರಾಯನಪುರ ಮತ್ತು ವಿಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆಯ ಪಂತರಪಾಳ್ಯದಲ್ಲಿ ಸೋಮವಾರ ಸಂಜೆ ನಡೆದಿದೆ.

ರಾಜರಾಜೇಶ್ವರಿನಗರ ನಿವಾಸಿ ಸೋನ್ ಡಿ ಜೋನ್ (40) ಮೃತಪಟ್ಟವರು. ಅವರು ಪೀಣ್ಯ ಬಳಿಯ ವಿಪ್ರೊ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ವೇಗವಾಗಿ ಬಂದ ಟೆಂಪೊ ಅವರ ಬೈಕ್ಗೆ ಡಿಕ್ಕಿ ಹೊಡೆಯಿತು. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಯಿತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು. ಚಾಲಕನನ್ನು ಬಂಧಿಸಿ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಬಸ್ ನಿಲ್ದಾಣದ ಸಮೀಪ ಮಂಗಳವಾರ ಮಧ್ಯಾಹ್ನ ನಡೆದಿದೆ.ಮೃತರ ಗುರುತು ಪತ್ತೆಯಾಗಿಲ್ಲ. ಅವರ ವಯಸ್ಸು ಸುಮಾರು 65 ವರ್ಷ ಎಂದು ವಿಜಯನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮಾರುತಿ ಮಂದಿರದಿಂದ ವಿಜಯನಗರ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಆ ವ್ಯಕ್ತಿಗೆ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದ ಅವರ ಮೇಲೆ ಅದೇ ಬಸ್ನ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು. ಚಾಲಕನನ್ನು ಬಂಧಿಸಿ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಕ್ರಮ ಅನಿಲ ಬಳಕೆ: ಬಂಧನ
ಅಡುಗೆ ಅನಿಲವನ್ನು ಅಕ್ರಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ಗಳಿಗೆ ತುಂಬಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಆರೋಪದ ಮೇಲೆ ಶ್ರೀರಾಮಪುರದ ಜಗದೀಶ್ (45) ಮತ್ತು ವೀರೇಶ (20) ಎಂಬುವರನ್ನು ನಗರದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಗೃಹೋಪಯೋಗಿ ಬಳಕೆಯ ಗ್ಯಾಸ್ ಸಿಲಿಂಡರ್ಗಳನ್ನು ಖರೀದಿಸಿ, ಅದರಲ್ಲಿರುವ ಅನಿಲವನ್ನು ವಾಣಿಜ್ಯ ಬಳಕೆಯ ಸಿಲಿಂಡರ್ಗಳಿಗೆ ತುಂಬಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಶ್ರೀರಾಮಪುರದ ಏಳನೇ ಅಡ್ಡರಸ್ತೆಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತರಿಂದ ವಿವಿಧ ಕಂಪೆನಿಗಳ 153 ಗ್ಯಾಸ್ ಸಿಲಿಂಡರ್ಗಳು, ಎರಡು ಕಾರು, ಮೊಬೈಲ್ ಫೋನ್ ಮತ್ತು ನಾಲ್ಕು ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಗ್ನಿ ಅನಾಹುತ
ನಗರದ ಹೆಸರುಘಟ್ಟ ಮುಖ್ಯರಸ್ತೆಯಲ್ಲಿರುವ ಸಿದ್ಧ ಉಡುಪು ಕಾರ್ಖಾನೆ ಒಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸುಮಾರು4.30 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ರಾತ್ರಿ 9 ಗಂಟೆ ಸುಮಾರಿಗೆ ಕಾರ್ಖಾನೆಯ ಒಳ ಭಾಗದಲ್ಲಿ ಬೆಂಕಿ ಹೊತ್ತಿಕೊಂಡು ಪೀಠೋಪಕರಣ, ಕಂಪ್ಯೂಟರ್, ಬಟ್ಟೆಗಳು ಮತ್ತಿತರ ವಸ್ತುಗಳು ಸುಟ್ಟು ಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದು ಐದು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.