ಕಳಪೆ ಕಾಮಗಾರಿ ವಿರುದ್ಧ ಕ್ರಮಕ್ಕೆ ಒತ್ತಾಯ

7

ಕಳಪೆ ಕಾಮಗಾರಿ ವಿರುದ್ಧ ಕ್ರಮಕ್ಕೆ ಒತ್ತಾಯ

Published:
Updated:

ರಾಯಚೂರು: ಮಾನ್ವಿ ತಾಲ್ಲೂಕಿನ ಕಲ್ಲೂರು ಗ್ರಾಮದ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಂಗಣದ ಕಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಈ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಕೆ.ಸುಮಿತ್ರ ಅವರು ಒತ್ತಾಯಿಸಿದ್ದಾರೆ.ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಂಗಣಕ್ಕೆ  ಫೆನಿಂಗ್ ಸಿಮೆಂಟ್ ಕಂಬಗಳನ್ನು ತೆಗೆದು ಗುತ್ತಿಗೆದಾರರು ಮಾರಾಟ ಮಾಡಿದ್ದಾರೆ. ಹದ್ದುಬಸ್ತು ಇಲ್ಲದೇ ಗೋಡೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಆಪಾದಿಸಿದ್ದಾರೆ.ಕಳಪೆ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರ ಹಾಗೂ ಕಿರಿಯ ಎಂಜಿನಿಯರ್, ಮಾನ್ವಿಯ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ವಿರುದ್ಧ ಕಾನೂನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry