ಕವಿ ಜಿ.ಎಸ್.ಶಿವರುದ್ರಪ್ಪ ಆಸ್ಪತ್ರೆಗೆ

7

ಕವಿ ಜಿ.ಎಸ್.ಶಿವರುದ್ರಪ್ಪ ಆಸ್ಪತ್ರೆಗೆ

Published:
Updated:

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಹಿರಿಯ ಕವಿ ಜಿ.ಎಸ್.ಶಿವರುದ್ರಪ್ಪ (87) ಅವರನ್ನು ನಗರದ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಶನಿವಾರ ಸಂಜೆ ದಾಖಲಿಸಲಾಗಿದೆ.



ಎದೆನೋವು ಹಾಗೂ ಉಸಿರಾಟದ ತೊಂದರೆ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಎಸ್‌ಎಸ್ ಅವರಿಗೆ 10 ವರ್ಷಗಳ ಹಿಂದೆ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಹೃದಯದ ಒಂದು ಕವಾಟ ಬದಲಿಸಲಾಗಿತ್ತು.



ಈಚೆಗೆ ಕಸಿ ಮಾಡಿರುವ ಹೃದಯ ಕವಾಟ ಜೀರ್ಣವಾಗಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry