ಕವಿ ನಿಸಾರ್ ಆಸ್ಪತ್ರೆಗೆ

7

ಕವಿ ನಿಸಾರ್ ಆಸ್ಪತ್ರೆಗೆ

Published:
Updated:

ಬೆಂಗಳೂರು: ಉಸಿರಾಟದ ತೊಂದರೆಯಿಂದ ಕವಿ ನಿಸಾರ್ ಅಹಮದ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ.ಅನಾರೋಗ್ಯದಿಂದ ಅವರನ್ನು ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿರುವ ಸಾಗರ್ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಬುಧವಾರ ಸಂಜೆ ದಾಖಲಿಸಲಾಗಿತ್ತು.ಹೃದಯ ಮತ್ತು ಶ್ವಾಸಕೋಶ ಸಂಬಂಧ ತೊಂದರೆಯಿಂದ ಅನಾರೋಗ್ಯಕ್ಕೀಡಾಗಿದ್ದ ನಿಸಾರ್ ಅಹಮದ್ ಅವರು ಕೆಲವು ದಿನಗಳಿಂದ ನ್ಯುಮೋನಿಯಾದಿಂದಲೂ ಬಳಲುತ್ತಿದ್ದರು. ಚಿಕಿತ್ಸೆಯಿಂದ ಈಗ ಅವರ ದೇಹ ಸ್ಥಿತಿ ಸಾಕಷ್ಟು ಸುಧಾರಿಸಿದ್ದು, ಪೂರ್ಣ ಗುಣಮುಖರಾಗಲಿದ್ದಾರೆ.

 

ಇನ್ನೆರಡು-ಮೂರು ದಿನಗಳಲ್ಲಿ ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆಯಾದರೆ ಆಸ್ಪತ್ರೆಯಿಂದ ಬಿಡುಗಡೆ ಮಾಡುತ್ತೇವೆ ಎಂದು ಸಾಗರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಕೆ.ಎಸ್.ಕಿಶೋರ್ `ಪ್ರಜಾವಾಣಿ~ಗೆ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry