ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಿ

7

ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಿ

Published:
Updated:

ಮಾಲೂರು: ವಿದ್ಯಾರ್ಥಿಗಳು ಕಷ್ಟಪಟ್ಟು ಬಲವಂತಕ್ಕಾಗಿ ವ್ಯಾಸಂಗ ಮಾಡದೆ ಇಷ್ಟಪಟ್ಟು ಏಕಾಗ್ರತೆಯಿಂದ ವ್ಯಾಸಂಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಜಯವರ್ಮ ಸಲಹೆ ನೀಡಿದರು.ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಹಾಗೂ ದಾನಿಗಳಿಂದ ನಿರ್ಮಿಸಿರುವ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಮಂಗಳವಾರ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಶಿಸ್ತಿನಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡು, ಭವಿಷ್ಯದಲ್ಲಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದರು.ಬಿಇಒ ವೆಂಕಟರಾಮರೆಡ್ಡಿ ಮಾತನಾಡಿ, ತಾಲ್ಲೂಕಿನ ಸರ್ಕಾರಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು ಪ್ರತಿಯೊಂದು ಶಾಲೆಯಲ್ಲಿಯೂ ಬೆಳಗಿನ ತರಗತಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಈ ಅವಕಾಶ ಸದುಯೋಗ ಪಡಿಸಿಕೊಳ್ಳುವ ಮೂಲಕ ಟಿ.ವಿ.ಗಳ ಮುಂದೆ ಕುಳಿತು ಕಾಲಹರಣ ಮಾಡುವುದನ್ನು ಬಿಟ್ಟು ದಿನಪತ್ರಿಕೆ ಓದುವ ಮೂಲಕ ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಪಿ.ವಿಜಿಕುಮಾರ್, ಪುರಸಭಾ ಅಧ್ಯಕ್ಷೆ ಗುಲಾಬ್ ಜಾನ್, ಉಪಾಧ್ಯಕ್ಷ ಎ.ರಾಜಪ್ಪ, ಸದಸ್ಯರಾದ ಅಮುದಾ ವೇಣು, ತಾ.ಪಂ ಸದಸ್ಯ ಎಸ್.ವಿ.ಲೋಕೇಶ್, ಈಶ್ವರಿ ಗ್ರೂಪ್ಸ್‌ನ ದಾನಿಗಳಾದ ಪಿ.ವೆಂಕಟೇಶ್, ಪ್ರಾಂಶುಪಾಲ ವೆಂಕಟೇಶಪ್ಪ, ಗೋವಿಂದೇಗೌಡ, ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry