ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಹೆಬ್ಬಾಳ ಮೇಲ್ಸೇತುವೆ ಪಕ್ಕದಲ್ಲಿ ಬಿಬಿಎಂಪಿಯ ಕಸ ತುಂಬಿದ ನಾಲ್ಕೈದು ಲಾರಿಗಳು ಪ್ರತಿದಿನ ದುರ್ನಾತವನ್ನು ಬೀರುತ್ತ ನಿಂತಿರುತ್ತವೆ. ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.

ಈ ಲಾರಿಗಳಿಂದ ಸೋರುವ ಹಸಿ ತ್ಯಾಜ್ಯವು ರಸ್ತೆಯ ಮೇಲೆಲ್ಲಾ ಹರಿಯುವುದರಿಂದ, ಇದರ ದುರ್ವಾಸನೆ ಸಹಿಸಲು ಅಸಾಧ್ಯವಾಗಿದೆ. ಸೊಳ್ಳೆಗಳೂ ಹೆಚ್ಚಾಗಿವೆ. ಈ ಬಗ್ಗೆ ಬಿಬಿಎಂಪಿ ನಿಯಂತ್ರಣ ಕೊಠಡಿಗೆ ಹಲವು ಬಾರಿ ದೂರವಾಣಿ ಮೂಲಕ ತಿಳಿಸಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ.

ಈಗಲಾದರೂ ಈ ಕಸ ತುಂಬಿದ ಲಾರಿಗಳನ್ನು ಇಲ್ಲಿಂದ ತೆರವುಗೊಳಿಸಿ, ಡೆಂಗೆ ಜ್ವರದಂತಹ ಕಾಯಿಲೆಗಳು ಹರಡುವುದಕ್ಕಿಂತ ಮುಂಚೆ ಬಿಬಿಎಂಪಿ ಆಯುಕ್ತರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿ.
-ಹೆಬ್ಬಾಳ ಎಂ. ಮಂಜುನಾಥ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.