ಮಂಗಳವಾರ, ಜೂನ್ 22, 2021
27 °C

ಕಸಾಪ ಚುನಾವಣಾ ವೈಖರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತೊಂದು ಅವಧಿಯ ಅಧ್ಯಕ್ಷರ ಆಯ್ಕೆಗೆ ಈಗ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿವೆ. ಪ್ರಚಾರ ಕಾರ್ಯವೂ ಬಿರುಸಾಗಿದೆ. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯುತ್ತಿದೆ.  ಕಣದಲ್ಲಿರುವ  ಅಭ್ಯರ್ಥಿಗಳು ಲಕ್ಷಾಂತರ ರೂಪಾಯಿಗಳನ್ನು ಮುದ್ರಣ, ಅಂಚೆ ವೆಚ್ಚ, ಮತದಾರರನ್ನು ಓಲೈಕೆಯ ಭೋಜನ ಕೂಟಗಳಿಗೆ ವೆಚ್ಚ ಮಾಡುತ್ತಿರುವ ವರದಿಗಳು ಬರುತ್ತಿವೆ.   ಪೂಜೆ, ಪುಸ್ತಕ ಬಿಡುಗಡೆಯಂತಹ ಕಾರ್ಯಕ್ರಮ ಹಮ್ಮಿಕೊಂಡು ಆ ಮೂಲಕ ಪ್ರಚಾರದಲ್ಲಿ ತೊಡಗಿದ್ದಾರೆ. ಸಾಹಿತ್ಯ ಪರಿಷತ್ತಿನ ಚುನಾವಣೆಗಳು ಹೀಗೆ ನಡೆಯಬೇಕೆ? ಅಭ್ಯರ್ಥಿಗಳು ಇಷ್ಟು ಹಣ ಖರ್ಚು ಮಾಡುವ ಉದ್ದೇಶವೇನು? ಹಣದ ಮೂಲ ಯಾವುದು? ಖರ್ಚು ಮಾಡಿದ ಹಣವನ್ನು ಮತ್ತೆ ಗಳಿಸುವ ದಾರಿಗಳಿವೆಯೇ? ಎಂಬ ಪ್ರಶ್ನೆಗಳು ಜನರ ಮನಸ್ಸಿನಲ್ಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳು ತಮ್ಮ ಆದಾಯ ಮೂಲವನ್ನು ಮತ್ತು ಚುನಾವಣಾ ಖರ್ಚಿನ ವಿವರಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು.  ಕಸಾಪ ಚುನಾವಣೆಗೆ ಭಾರಿ ಹಣ ಖರ್ಚು ಮಾಡುತ್ತಿರುವ ಅಭ್ಯರ್ಥಿಗಳ ಬಗ್ಗೆ ಸಾಹಿತ್ಯ ಪರಿಷತ್ತಿನ ಪ್ರಜ್ಞಾವಂತ ಮತದಾರರು ಎಚ್ಚರ ವಹಿಸಬೇಕು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.