ಸೋಮವಾರ, ಮೇ 17, 2021
31 °C

ಕಸಾಪ ಚುನಾವಣೆ: ಮತದಾನಕ್ಕೆ ಶಿಕ್ಷಕರಿಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರೂ ಆಗಿರುವ ಶಿಕ್ಷಕರಿಗೆ, ಇದೇ 29ರಂದು ನಡೆಯುವ ಕಸಾಪ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುಮತಿ ನೀಡಿದೆ.ಕಸಾಪ ಮತದಾರರ ಪಟ್ಟಿಯಲ್ಲಿ ಶಿಕ್ಷಕರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಮತದಾನದ ದಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವೂ ಇದೆ. ಹಲವು ಶಿಕ್ಷಕರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಾಕಷ್ಟು ಮಂದಿ ಮನವಿ ಮಾಡಿದ್ದರು. ಇದನ್ನು ಮಂಡಳಿಯ ಗಮನಕ್ಕೆ ತಂದು ಅವರಿಂದ ಅನುಮತಿ ಪಡೆದುಕೊಳ್ಳಲಾಗಿದೆ ಎಂದು ಕಸಾಪ ಕೇಂದ್ರ ಚುನಾವಣಾ ಅಧಿಕಾರಿ ಎಸ್.ಟಿ. ಮೋಹನ ರಾಜು `ಪ್ರಜಾವಾಣಿ~ಗೆ ತಿಳಿಸಿದರು.

ಶಿಕ್ಷಕರು ಮತದಾನದ ದಿನ ಕೆಲವು ಗಂಟೆಗಳ ಕಾಲ ಪರೀಕ್ಷಾ ಕೇಂದ್ರದಿಂದ ಹೊರಬಂದು, ಮತದಾನದಲ್ಲಿ ಪಾಲ್ಗೊಳ್ಳಲು ಮಂಡಳಿ ಅವಕಾಶ ನೀಡಿದೆ ಎಂದು ಅವರು ಮಾಹಿತಿ ನೀಡಿದರು. ಇದೇ 23ರಿಂದ 30ರವರೆಗೆ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.