ಮಂಗಳವಾರ, ಮೇ 24, 2022
30 °C

ಕಸಾಪ ಪ್ರಗತಿಗೆ ಸರ್ಕಾರ ಪ್ರೋತ್ಸಾಹ: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಶತಮಾನೋತ್ಸವದ ಹೊಸ್ತಿಲಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಪ್ರೋತ್ಸಾಹ ನೀಡಲಿದೆ' ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ `ವಸುದೇವ ಭೂಪಾಲಂ ದತ್ತಿ' ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.`ಪರಿಷತ್ತಿನ ಆವರಣದಲ್ಲಿ ಭವನ ನಿರ್ಮಾಣಕ್ಕೆ ಅಗತ್ಯವಿರುವ ಆರ್ಥಿಕ ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ' ಎಂದ ಅವರು, `ಕನ್ನಡ ಮಾಧ್ಯಮದಲ್ಲಿ ಕಲಿತವರೆಲ್ಲರಿಗೂ ಇಂಗ್ಲಿಷ್ ಮಾಧ್ಯಮದಲ್ಲಿ ಸಂವಹನ ನಡೆಸಲು ಸಾಧ್ಯವಿದೆ. ಹಾಗಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯುವುದರಿಂದ ಉದ್ಯೋಗ ಪಡೆಯಲು ಯಾವುದೇ ತೊಂದೆಯಾಗದು' ಎಂದು ಅಭಿಪ್ರಾಯಪಟ್ಟರು.ಸಾಹಿತಿ ಡಾ.ಆರ್.ಕೆ.ನಲ್ಲೂರು ಪ್ರಸಾದ್, `ಪರಿಷತ್ತಿನಲ್ಲಿ ರೂ 15 ಮೌಲ್ಯದ ದತ್ತಿಯಿಂದ ರೂ 7ಲಕ್ಷ ಮೊತ್ತದ ದತ್ತಿಯಿದೆ. ಲಾಬಿ ಇಲ್ಲದೇ ಪ್ರಶಸ್ತಿ ನೀಡುವುದೇ ಈ ಸಂಸ್ಥೆಯ ಹೆಗ್ಗಳಿಕೆ ಮತ್ತು ಶಕ್ತಿ' ಎಂದು ತಿಳಿಸಿದರು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಕೃಷ್ಣಮೂರ್ತಿ ಹನೂರು ಅವರು, `ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆ ನಶಿಸಿರುತ್ತಿರುವುದು ಆತಂಕದ ವಿಚಾರ. ಆದರೆ ಇದರ ನಡುವೆಯು ಸಾಹಿತ್ಯ ಪರಿಷತ್ತು ಕನ್ನಡಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಉತ್ತಮ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿರುವುದು ಸಂತೋಷದ ತಂದಿದೆ' ಎಂದು ತಿಳಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಇತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.