ಭಾನುವಾರ, ಏಪ್ರಿಲ್ 11, 2021
25 °C

ಕಸಾಯಿಖಾನೆಗೆ ಸಾಗಿಸುತ್ತಿದ್ದ 9 ಎತ್ತುಗಳ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಖಾನಾಪುರ: ತಾಲ್ಲೂಕಿನ ಶಿರೋಲಿ ಬಳಿ ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿಯಲ್ಲಿ ಗೋವಾ ರಾಜ್ಯದ ಕಸಾಯಿಖಾನೆಗೆ ಸಾಗಿಸುತ್ತಿದ್ದ 9 ಎತ್ತುಗಳನ್ನು ಪಟ್ಟಣ ಪೊಲೀಸರು ರಕ್ಷಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಒಂದು 407 ಟೆಂಪೋ ಹಾಗೂ ಅದರ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.ಪಿಎಸ್‌ಐ ಧೀರಜ್ ಶಿಂಧೆ ನೇತೃತ್ವದಲ್ಲಿ ನಡೆದ ಈ ಕಾರ್ಯಾ ಚರಣೆಯಲ್ಲಿ  ವಶಪಡಿಸಿ ಕೊಂಡ ಎತ್ತುಗಳನ್ನು ಬೆಳಗಾವಿ ತಾಲ್ಲೂಕು ಕೆ.ಕೆ ಕೊಪ್ಪದಲ್ಲಿರುವ ಗೋಶಾಲೆಗೆ ರವಾನಿಸಲಾಗಿದೆ. 9 ಎತ್ತುಗಳ ಪೈಕಿ ಒಂದು ಎತ್ತು ತೀವ್ರವಾಗಿ ಗಾಯ ಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.