ಮಂಗಳವಾರ, ಜೂನ್ 22, 2021
28 °C

ಕಸ್ತೂರಿ ರಂಗನ್‌ ವರದಿ: ಚರ್ಚಿಸಿ ನಿರ್ಧಾರ: ರೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಕಸ್ತೂರಿ ರಂಗನ್‌ ವರದಿಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ ಸಚಿವ ರಮಾನಾಥ ರೈ ತಿಳಿಸಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಹಕ್ಕು ಕಾಯ್ದೆ ಜಾರಿಯಾಗಿ ಏಳು ವರ್ಷ ಕಳೆದರೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಅರಣ್ಯ ಭೂಮಿ ಸ್ವಾಧೀನಕ್ಕೆ ಅರ್ಜಿ ಹಾಕಿದ ಅರಣ್ಯ ಅತಿಕ್ರಮಣದಾರರ ಪೈಕಿ ಶೇ 16ರಷ್ಟು ಮಂದಿಗೆ ಮಾತ್ರ ಹಕ್ಕುಪತ್ರ ನೀಡಲಾಗಿದೆ.ಉಳಿದ ಎಲ್ಲ ಅತಿಕ್ರಮಣದಾರರಿಗೂ ಶೀಘ್ರದಲ್ಲಿ ಹಕ್ಕುಪತ್ರ ವಿತರಿಸಲಾಗುವುದು ಎಂದು ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.