ಶನಿವಾರ, ಮೇ 8, 2021
24 °C

ಕಾಂಗ್ರೆಸಿಗರ ಕಾಲ್ನಡಿಗೆ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಭಾರತ್ ನಿರ್ಮಾಣ ಯಾತ್ರೆ ಅಂಗವಾಗಿ ನಗರದಲ್ಲಿ ಸೋಮವಾರ ಕಾಂಗ್ರೆಸ್‌ ಕಾರ್ಯಕರ್ತರು ಕಾಲ್ನಡಿಗೆ ಜಾಥಾ ನಡೆಸಿದರು.

ಹಳೇ ತಾಲ್ಲೂಕು ಕಚೇರಿ ಆವರಣದಿಂದ ಆರಂಭಗೊಂಡ ಜಾಥಾ ನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿ ಕಾರ್ಯಕ್ರಮ ನಡೆಯುವ ಗಾಯತ್ರಿದೇವಿ ಕಲ್ಯಾಣ ಮಂಟಪ ತಲುಪಿತು.ಕಾಲ್ನಡಿಗೆ ಜಾಥಾ ಸಾಗುವಾಗ ಮುಖ್ಯ ವೃತ್ತಗಳಲ್ಲಿ ಪಟಾಕಿ ಸಿಡಿಸಲಾಯಿತು. ಪಕ್ಷದ ಜಿಲ್ಲಾ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್, ವಿಧಾನ ಪರಿಷತ್ ಸದಸ್ಯೆ ಮೋಟಮ್ಮ, ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷ ಎಂ.ಎಲ್.ಮೂರ್ತಿ, ಮಹಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್, ಕಿಸಾನ್ ಕೇತ್ ಮಜ್ದೂರ್ ಕಾಂಗ್ರೆಸ್‌ ರಾಜ್ಯ ಉಪಾಧ್ಯಕ್ಷ  ಸಚಿನ್ ಮೀಗಾ, ಉಪಾಧ್ಯಕ್ಷ ಕೆ.ಎಸ್‌. ಶಾಂತೇಗೌಡ, ಬ್ಲಾಕ್ ಅಧ್ಯಕ್ಷ  ಉರಾಳ್, ಪ್ರಧಾನ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಸೇವಾ ದಳ ಅಧ್ಯಕ್ಷ ಆನಂದ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವನಮಾಲ ಮೃತ್ಯುಂಜಯ, ಯುವ ಕಾಂಗ್ರೆಸ್‌ ಅಧ್ಯಕ್ಷ ಶಿವಕುಮಾರ್, ನಗರಸಭಾ ಸದಸ್ಯರಾದ ಹಿರೇಮಗಳೂರು ಪುಟ್ಟಸ್ವಾಮಿ, ರೂಬೆನ್ ಮೊಸಸ್, ಸುರೇಖಾ, ಜಗದೀಶ್, ಲಕ್ಷ್ಮಣ್ ಇದ್ದರು.ಸಂಸದ ಜಯಪ್ರಕಾಶಹೆಗ್ಡೆ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಈ ಚುನಾವಣೆಯಲ್ಲಿ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಯುಪಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಆಗಿರುವ ಕೆಲಸಗಳನ್ನು ಕಾರ್ಯಕರ್ತರು ಮತ್ತು ಮುಖಂಡರು ಜನರಿಗೆ ತಿಳಿಸುವುದು ಅಗತ್ಯವಾಗಿದೆ ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮಾತನಾಡಿ, ಸರಳ ವ್ಯಕ್ತಿತ್ವದ ಸಂಸದ ಹೆಗ್ಡೆ ಗೆಲುವಿಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.