ಶುಕ್ರವಾರ, ನವೆಂಬರ್ 22, 2019
22 °C

`ಕಾಂಗ್ರೆಸ್ಸಿಗಿಂತ ಬಿಜೆಪಿ ಸರ್ಕಾರ ಹೆಚ್ಚು ಭ್ರಷ್ಟ'

Published:
Updated:

ಗ್ವಾಲಿಯರ್ (ಪಿಟಿಐ): ದಿಗ್ವಿಜಯ ಸಿಂಗ್ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರಕ್ಕಿಂತ ಮಧ್ಯಪ್ರದೇಶದಲ್ಲಿ ಈಗಿರುವ ಬಿಜೆಪಿ ಸರ್ಕಾರ ಹೆಚ್ಚು ಭ್ರಷ್ಟವಾಗಿದೆ ಎಂದು ಬಿಜೆಪಿ ಮಾಜಿ ಚಿಂತಕ ಕೆ.ಎನ್. ಗೋವಿಂದಾಚಾರ್ಯ ಆರೋಪಿದ್ದಾರೆ.`ಮಧ್ಯಪ್ರದೇಶದಲ್ಲಿ ಈಗ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಹಿಂದಿನ ಕಾಂಗ್ರೆಸ್ ಸರ್ಕಾರಕ್ಕಿಂತ ಹೆಚ್ಚು ಭ್ರಷ್ಟವಾಗಿದೆ' ಎಂದು ಗೋವಿಂದಾಚಾರ್ಯ  ಅವರು ಭಾನುವಾರ ಸುದ್ದಿಗಾರರಿಗೆ ಇಲ್ಲಿ ಹೇಳಿದ್ದಾರೆ.ತಮ್ಮ ಸಂಪುಟದ ಸಚಿವರನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿಫಲವಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಉದ್ಯಮಿಗಳು ಹಾಗೂ ಅಧಿಕಾರಿಗಳು ಸಂತೋಷವಾಗಿದ್ದು, ರೈತರ ಸ್ಥಿತಿ ಗಂಭೀರವಾಗಿದೆ ಎಂದು ಗೋವಿಂದಾಚಾರ್ಯ ದೂರಿದ್ದಾರೆ.

ಪ್ರತಿಕ್ರಿಯಿಸಿ (+)