ಕಾಂಗ್ರೆಸ್ಸೇತರ ಅಭ್ಯರ್ಥಿಗೆ ಬೆಂಬಲ

ಮಂಗಳವಾರ, ಜೂಲೈ 16, 2019
25 °C

ಕಾಂಗ್ರೆಸ್ಸೇತರ ಅಭ್ಯರ್ಥಿಗೆ ಬೆಂಬಲ

Published:
Updated:

ಚೆನ್ನೈ/ನವದೆಹಲಿ (ಪಿಟಿಐ): ಉಪರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ತೀವ್ರ ಕಸರತ್ತು ಆರಂಭಿಸಿರುವ ಬೆನ್ನಲ್ಲೇ `ಈ ಸ್ಥಾನಕ್ಕೆ ಕಾಂಗ್ರೆಸ್‌ಗೆ ಹೊರತಾದ ವ್ಯಕ್ತಿಯನ್ನು ಬೆಂಬಲಿಸುವುದಾಗಿ~ ಸಿಪಿಎಂ ವ್ಯತಿರಿಕ್ತ ಹೇಳಿಕೆ ನೀಡುವ ಮೂಲಕ ಚುನಾವಣೆಗೆ ಹೊಸ ರಾಜಕೀಯ ತಿರುವು ನೀಡಿದೆ.ಒಮ್ಮತ ಅಭ್ಯರ್ಥಿಗೆ ಬೆಂಬಲ ಕೋರಲು ಇತ್ತೀಚೆಗೆ ತಮ್ಮನ್ನು ದೂರವಾಣಿಯಲ್ಲಿ ಸಂಪರ್ಕಿಸಿದ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪಕ್ಷದ  ನಿಲುವನ್ನು ಸ್ಪಷ್ಟಪಡಿಸಿರುವುದಾಗಿ ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ತಿಳಿಸಿದರು.  ಎನ್‌ಡಿಎ ಜತೆ ಜೆಡಿಯು ಚರ್ಚೆ: ಉಪರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಅಭ್ಯರ್ಥಿ ಘೋಷಣೆಯನ್ನು ಎದುರು ನೋಡುತ್ತಿರುವುದಾಗಿ ಹೇಳಿರುವ ಜೆಡಿಯು, ಈ ಕುರಿತು ಯಾವುದೇ ತೀರ್ಮಾನ ಕೈಗೊಳ್ಳುವ ಮೊದಲು ಎನ್‌ಡಿಎಯ ಮಿತ್ರಪಕ್ಷಗಳ ಜೊತೆ ಚರ್ಚಿಸುವುದಾಗಿ ಸ್ಪಷ್ಟಪಡಿಸಿದೆ.ಉಪರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಕುರಿತಂತೆ ಇದುವರೆಗೂ ಪಕ್ಷ ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಅನುಸರಿಸುವ ಮಾರ್ಗಗಳನ್ನು ನೋಡಿದ ನಂತರ ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಯು ಮುಖ್ಯಸ್ಥ ಶರದ್ ಯಾದವ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry