ಕಾಂಗ್ರೆಸ್‌ಗೆ ತಕ್ಕ ಉತ್ತರ: ಕುಮಾರಸ್ವಾಮಿ

7

ಕಾಂಗ್ರೆಸ್‌ಗೆ ತಕ್ಕ ಉತ್ತರ: ಕುಮಾರಸ್ವಾಮಿ

Published:
Updated:

ಪೀಣ್ಯ ದಾಸರಹಳ್ಳಿ: `ಕಾವೇರಿ ವಿವಾದವನ್ನು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸುವ ಬಗ್ಗೆ ರಾಜ್ಯದ ಕಾಂಗ್ರೆಸ್ ಮುಖಂಡರು ಗಮನ ಹರಿಸುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ ಎಂಬ ಭ್ರಮೆಯಲ್ಲಿ ಇದ್ದಾರೆ' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.ನಾಗರಬಾವಿ ಕೊಟ್ಟಿಗೆಪಾಳ್ಯದ ಒಕ್ಕಲಿಗರ ಸಂಘದ ವಿದ್ಯಾಸಂಸ್ಥೆಯ ಕ್ರೀಡಾ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.`ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡುವರು' ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry