ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ರಮೇಶ್ ಸೇವೆ ಶ್ಲಾಘನೀಯ

Last Updated 8 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ದಿವಂಗತ ಎಸ್. ರಮೇಶ್ ಅವರ ಸೇವೆ ಶ್ಲಾಘನೀಯವಾದುದು~ ಎಂದು ಕೇಂದ್ರದ ಮಾಜಿ ಸಚಿವ ಬೂಟಾಸಿಂಗ್ ಭಾನುವಾರ ಇಲ್ಲಿ ಹೇಳಿದರು.

ಎಸ್. ರಮೇಶ್ ಪುಣ್ಯ ಸ್ಮರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ `ಸ್ನೇಹ ಮಿಲನ~ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

`ಎಸ್. ರಮೇಶ್ ಅವರು ನಮ್ಮನ್ನು ಬಹುಬೇಗ ಅಗಲಿರುವುದು ಒಂದು ರೀತಿಯಲ್ಲಿ ಎಲ್ಲವನ್ನೂ ಕಳೆದುಕೊಂಡಂತಾಗಿದೆ. ನಾನು ಉತ್ತರ ಭಾರತದವನಾದರೂ ದಕ್ಷಿಣ ಭಾರತದಲ್ಲಿ ಗುರುತಿಸಿಕೊಳ್ಳಲು ರಮೇಶ್ ಅವರ ಸಹಾಯ ಮರೆಯಲಾರೆ~ ಎಂದರು.

`ತುರ್ತು ಪರಿಸ್ಥಿತಿ ಕಾಲದಲ್ಲಂತೂ ಇಂದಿರಾಗಾಂಧಿ ಅವರ ಚಿತ್ರವುಳ್ಳ ಬಾವುಟಗಳನ್ನು ಹಿಡಿದು ಗಲ್ಲಿ-ಗಲ್ಲಿಗಳಲ್ಲಿ ತಿರುಗುವ ಮೂಲಕ ತುರ್ತು ಪರಿಸ್ಥಿತಿಯ ಅನಿವಾರ್ಯತೆಯನ್ನು ಜನತೆಗೆ ಮುಟ್ಟಿಸುವಲ್ಲಿ ರಮೇಶ್ ಪ್ರಮುಖ ಪಾತ್ರ ವಹಿಸಿದ್ದರು~ ಎಂದು ಸ್ಮರಿಸಿದರು.

`ಕೇವಲ ರಾಜಕೀಯ ಕ್ಷೇತ್ರವಲ್ಲದೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿಯೂ ರಮೇಶ್ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ನೆನಪಿನಲ್ಲಿ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಏನಾದರೊಂದು ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಾನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಒತ್ತಾಯಿಸುತ್ತೇನೆ. ಅಲ್ಲದೆ, ಈ ಕಾರ್ಯಕ್ರಮವನ್ನು ಸೋನಿಯಾಗಾಂಧಿ ಅವರ ಹಸ್ತದಿಂದಲೇ ಚಾಲನೆ ಕೊಡಿಸಲು ಮನವಿ ಮಾಡುತ್ತೇನೆ~ ಎಂದು ಹೇಳಿದರು.

ಶಾಸಕರಾದ ಆರ್. ರೋಷನ್ ಬೇಗ್, ದಿನೇಶ್ ಗುಂಡೂರಾವ್, ಎನ್.ಎ. ಹ್ಯಾರಿಸ್, ವಿಧಾನ ಪರಿಷತ್ ಸದಸ್ಯ ಎಂ.ಆರ್. ಸೀತಾರಾಂ, ಕಾಂಗ್ರೆಸ್ ಮುಖಂಡ ಅಲ್ಲಂ ವೀರಭದ್ರಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ, ಕರ್ನಾಟಕ ರಾಜ್ಯ ವಸತಿ ಮಹಾಮಂಡಲದ ಅಧ್ಯಕ್ಷ ಎಸ್.ಟಿ. ಸೋಮಶೇಖರ್, ನಟರಾದ ಉಪೇಂದ್ರ, ಜೈಜಗದೀಶ್, ನಟಿ ಪ್ರಿಯಾಂಕ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ರಮೇಶ್ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು.

`ಸ್ನೇಹ ಮಿಲನ~ ಕಾರ್ಯಕ್ರಮದ ಅಂಗವಾಗಿ ರಕ್ತದಾನ, ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಅಲ್ಲದೆ, ಅಂಗವಿಕಲರಿಗೆ ಸಹಾಯಧನ ನೀಡಲಾಯಿತು. ಎಸ್. ರಮೇಶ್ ಪತ್ನಿ ಹೇಮಲತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT