ಶನಿವಾರ, ಜೂನ್ 12, 2021
24 °C

ಕಾಂಗ್ರೆಸ್‌ನಲ್ಲೇ ಸಾಂಗ್ಲಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡರನ್ನು ಭೇಟಿ ಮಾಡಿ ದೆಹಲಿಯಿಂದ ಶನಿವಾರ ಬೆಂಗಳೂರಿಗೆ ಹಿಂದಿರುಗಿದ ಮಾಜಿ ಸಂಸದ ಎಚ್‌.ಟಿ.ಸಾಂಗ್ಲಿಯಾನ ಅವರು, ಕಾಂಗ್ರೆಸ್‌ನಲ್ಲೇ ಮುಂದುವರಿಯುವ ನಿರ್ಧಾರವನ್ನು ಪ್ರಕಟಿಸಿದರು.ಸಾಂಗ್ಲಿಯಾನ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಿಜ್ವಾನ್‌ ಅರ್ಷದ್‌ ಅವರಿಗೆ ಟಿಕೆಟ್‌ ನೀಡಿದ್ದರಿಂದ ಅಸಮಾಧಾನಗೊಂಡಿದ್ದರು. ಜೆಡಿಎಸ್‌ ಪಕ್ಷ ಅವರಿಗೆ ಆಹ್ವಾನ ನೀಡಿತ್ತು.ದೆಹಲಿ ಭೇಟಿ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ರಾಜ್ಯದ ಯಾವುದೇ ಲೋಕಸಭಾ ಕ್ಷೇತ್ರದಲ್ಲೂ ಕ್ರೈಸ್ತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡದೆ ಇರುವುದರಿಂದ ನಮಗೆ ಬೇಸರ ಆಗಿದೆ ಎಂಬುದನ್ನು ಹೈಕಮಾಂಡ್‌ನ ಪ್ರಮುಖರ ಗಮನಕ್ಕೆ ತಂದಿದ್ದೇನೆ. ಮುಂದಿನ ದಿನಗಳಲ್ಲಿ ಅವಕಾಶ ನೀಡುವುದಾಗಿ ಪಕ್ಷದ ಪ್ರಮುಖರು ಭರವಸೆ ನೀಡಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್‌ನಲ್ಲೇ ಉಳಿಯಲು ನಿರ್ಧರಿಸಿದ್ದೇನೆ’ ಎಂದರು.‘ಜೆಡಿಎಸ್‌ ಆಹ್ವಾನ ನೀಡಿತ್ತು. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣಕ್ಕಿಳಿಯುವಂತೆ ತೃಣಮೂಲ ಕಾಂಗ್ರೆಸ್‌ ಆಹ್ವಾನ ನೀಡಿತ್ತು. ಆದರೆ, ಪಕ್ಷ ತೊರೆಯಬೇಡಿ ಎಂದು ಕಾಂಗ್ರೆಸ್‌ ನಾಯಕರು ಸೂಚಿಸಿದ್ದಾರೆ. ಅದರಂತೆ ಪಕ್ಷದಲ್ಲೇ ಮುಂದುವರಿಯುವ ನಿರ್ಧಾರಕ್ಕೆ ಬಂದಿದ್ದೇನೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ಭಾಗವಹಿಸಿ, ಅವರ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.