ಸೋಮವಾರ, ಜೂನ್ 21, 2021
29 °C

ಕಾಂಗ್ರೆಸ್‌ನಿಂದ ಅಭಿವೃದ್ಧಿ: ಖಾದರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೀರ್ಥಹಳ್ಳಿ: ಕಾಂಗ್ರೆಸ್‌ ಜನಸಾಮಾನ್ಯರ ಪಕ್ಷವಾಗಿದೆ. ಕಾಂಗ್ರೆಸ್‌ನಿಂದ ದೇಶದ  ಅಭಿವೃದ್ಧಿ ಸಾಧ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಅಭಿಪ್ರಾಯಪಟ್ಟರು.

ಸೋಮವಾರ ತೀರ್ಥಹಳ್ಳಿಯ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಕೇಂದ್ರ ಸರ್ಕಾರದ ಅನೇಕ ಜನಪರ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಮಾಹಿತಿ ಹಕ್ಕು, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣ ಕ್ಷೇತ್ರದಲ್ಲಿನ ಪ್ರಗತಿ ಜನರ ಮುಂದಿದೆ ಎಂದರು.ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಟಿ.ಎಲ್‌.ಸುಂದರೇಶ್‌, ಪಟಮಕ್ಕಿ ಮಹಾಬಲೇಶ್‌, ಮಾಜಿ ಶಾಸಕ ಪಟಮಕ್ಕಿ ರತ್ನಾಕರ್‌,   ಕೆಸ್ತೂರ್‌ ಮಂಜುನಾಥ್‌, ಹೊಸಳ್ಳಿ ಸುಧಾಕರ್‌, ಬಾಳೇಹಳ್ಳಿ ಪ್ರಬಾಕರ್‌, ಮಹಮದ್‌ ಜಫ್ರುಲ್ಲಾ ಇತರರು ಹಾಜರಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.