ಕಾಂಗ್ರೆಸ್‌ನಿಂದ ಚುನಾವಣಾ ಆಯೋಗಕ್ಕೆ ದೂರು

ಶುಕ್ರವಾರ, ಮೇ 24, 2019
25 °C

ಕಾಂಗ್ರೆಸ್‌ನಿಂದ ಚುನಾವಣಾ ಆಯೋಗಕ್ಕೆ ದೂರು

Published:
Updated:

ಬೆಂಗಳೂರು: ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಣ- ಹೆಂಡ ಹಂಚಿ ಅಕ್ರಮಗಳನ್ನು ಎಸಗುತ್ತಿದ್ದು, ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಚುನಾವಣಾ ಅಯೋಗಕ್ಕೆ ದೂರು ನೀಡಿದೆ.ಕಾಂಗ್ರೆಸ್‌ನ ಶಿಸ್ತು ಸಮಿತಿ ಅಧ್ಯಕ್ಷ ಎ.ಬಿ.ಮಾಲಕ ರೆಡ್ಡಿ ನೇತೃತ್ವದಲ್ಲಿ ಮುಖಂಡರು ಸೋಮವಾರ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿದರು.25ಕ್ಕೂ ಹೆಚ್ಚು ಸಚಿವರು ಕೊಪ್ಪಳದ ವಿವಿಧ ಹೋಬಳಿಗಳಲ್ಲಿ ಬೀಡುಬಿಟ್ಟಿದ್ದು, ಹಣ ಹಂಚುವ ಕೆಲಸದಲ್ಲಿ ತಲ್ಲೆನರಾಗಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ತಕ್ಷಣವೇ ವಿಶೇಷ ವೀಕ್ಷಕರನ್ನು ನೇಮಿಸಬೇಕು ಎಂದೂ ಒತ್ತಾಯಿಸಿದ್ದಾರೆ.ಶಾಸಕರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಉದಯಶಂಕರ್ ಸೇರಿದಂತೆ ಇತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry