ಕೆಜಿಎಫ್: ಬಿಜೆಪಿ ಪಕ್ಷವು ಸಮಾಜವನ್ನು ಒಗ್ಗೂಡಿಸಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷ ಉಪಜಾತಿಗಳ ನಡುವೆ ಕಂದರ ಸೃಷ್ಟಿಸಿ ಸಮಾಜವನ್ನು ಒಡೆಯಲು ಯತ್ನಿಸುತ್ತಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಶಿವಯೋಗಿಸ್ವಾಮಿ ಆರೋಪಿಸಿದರು.

‘ಚುನಾವಣೆ ಫಲಿತಾಂಶ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ. ಕಾಂಗ್ರೆಸ್ಗೆ ನಿದ್ದೆಕೆಡಿಸಿದೆ ಎಂದು ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

ವಿಧಾನಪರಿಷತ್ ಸದಸ್ಯ ವೈ.ಎನ್.ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಕರಿಗೆ ಪಾಠ ಬಿಟ್ಟು ಉಳಿದೆಲ್ಲಾ ಕೆಲಸಗಳನ್ನು ಮಾಡಲು ಹೇಳಲಾಗುತ್ತಿದೆ. ಆರೋಗ್ಯಭಾಗ್ಯ, ಕ್ಷೀರಭಾಗ್ಯ, ಜನಗಣತಿ ಮೊದಲಾದ ಹೆಚ್ಚುವರಿ ಕೆಲಸಗಳನ್ನು ನೀಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಸರ್ಕಾರಿ ಶಾಲೆಗಳು ಮುಚ್ಚಬೇಕಾದ ಪರಿಸ್ಥಿತಿ ಬರಬೇಕಾಗುತ್ತದೆ ಎಂದರು.

ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣ ಮಾಡಿ ತಮಿಳುನಾಡಿಗೆ ಹೆಚ್ಚುವರಿಯಾಗಿ ಹರಿದುಹೋಗುವ ನೀರನ್ನು ಸಂಗ್ರಹಿಸಬೇಕು. ಗುರುತ್ವಾಕರ್ಷಣೆಯಿಂದ ಸಂಗ್ರಹಿಸಿದ ನೀರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸಬಹುದು ಎಂದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಸುರೇಶ್ನಾರಾಯಣಕುಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.