ಬೆಂಗಳೂರು: `ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತ ಬಂದಿರುವ ದಲಿತ ಸಮುದಾಯದವರಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ನೀಡಬೇಕಿತ್ತು. ಆದರೆ ಆ ಸ್ಥಾನವನ್ನು ಹಿಂದುಳಿದ ವರ್ಗಗಳ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಕಾಂಗ್ರೆಸ್, ದಲಿತರನ್ನು ವಂಚಿಸಿದೆ' ಎಂದು ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಘಟಕದ ಉಪಾಧ್ಯಕ್ಷ ಎಂ.ಡಿ. ಚಂದ್ರಶೇಖರ್ ದೂರಿದರು.

ಪ್ರೆಸ್ ಕ್ಲಬ್ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ದಲಿತರ ಪಾಲಿಗೆ ಕಾಂಗ್ರೆಸ್ ಶತ್ರು. ಕಾಂಗ್ರೆಸ್ಸಿಗೆ ದಲಿತರು ಮತ ನೀಡಬಾರದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಕರೆ ನೀಡಿದ್ದರು. ಅವರ ಮಾತು ಮೀರಿ, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರ ಫಲವನ್ನು ದಲಿತರು ಅನುಭವಿಸುತ್ತಿದ್ದಾರೆ' ಎಂದು ಹೇಳಿದರು.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ದಲಿತ ಸಮುದಾಯದವರಿಗೆ ನೀಡಲಾಗುವುದೇ ಎಂಬ ಪ್ರಶ್ನೆಗೆ, `ಈ ಕುರಿತು ಪಕ್ಷದ ಮುಖಂಡರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ' ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.