ಭಾನುವಾರ, ಜೂನ್ 13, 2021
25 °C

ಕಾಂಗ್ರೆಸ್‌ನಿಂದ ಪ್ರತಿಭಟನೆ, ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ರಾಜ್ಯ ಬಿಜೆಪಿ ಸರ್ಕಾರದ ಭಿನ್ನಮತ, ರೆಸಾರ್ಟ್ ರಾಜಕೀಯ ಖಂಡಿಸಿ ಪ್ರತಿಭಟನೆ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿಗೆ ವಿಜಯೋತ್ಸವ ಬುಧವಾರ ಏಕಕಾಲದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆಯಿತು.

ಪಾಲಿಕೆ ಮುಂಭಾಗ ಸೇರಿದ ಕಾರ್ಯಕರ್ತರು ಬಿಜೆಪಿಗೆ ಧಿಕ್ಕಾರ, ಕಾಂಗ್ರೆಸ್ ಗೆಲುವಿಗೆ ಜಯಕಾರ ಕೂಗಿದರು.

ಗಾಂಧಿವೃತ್ತದಲ್ಲಿ ಸೇರಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಜಬ್ಬಾರ್, ಕೆಪಿಸಿಸಿ ಸದಸ್ಯ ಡಿ. ಬಸವರಾಜ್, ಪಾಲಿಕೆ ವಿರೋಧ ಪಕ್ಷದ ನಾಯಕ ಡಿ.ಎನ್. ಜಗದೀಶ್, ದಿನೇಶ್ ಕೆ. ಶೆಟ್ಟಿ ಇತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.