ಗುರುವಾರ , ಮೇ 13, 2021
24 °C

ಕಾಂಗ್ರೆಸ್‌ನಿಂದ ಮತದಾರರೊಂದಿಗೆ ಮುಖಾಮುಖಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡಲಸಂಗಮ (ಬಾಗಲಕೋಟೆ): ಪಕ್ಷ ಸಂಘಟನೆ ಉದ್ದೇಶದಿಂದ ರಾಜ್ಯದಾದ್ಯಂತ ಅಕ್ಟೋಬರ್ 2ರಿಂದ `ಮತದಾರರೊಂದಿಗೆ ಮುಖಾಮುಖಿ~ ಕಾರ್ಯಕ್ರಮವನ್ನು ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದರು.ಕೂಡಲಸಂಗಮದಲ್ಲಿ ಸೋಮವಾರ ನಡೆದ `ಕಾಂಗ್ರೆಸ್ ನಡಿಗೆ -ಜನರ ಬಳಿಗೆ~ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಡಿಗೆ  ಕಾರ್ಯಕ್ರಮವು ತಳಮಟ್ಟದಲ್ಲಿ ಪಕ್ಷ ಸಂಘಟನೆಯ ಉದ್ದೇಶದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದರು.ನಡಿಗೆಯ ಅವಧಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ 10789 ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆಸಲಾಗಿದೆ, 4666 ಬೂತ್‌ನಲ್ಲಿ ಸಮಿತಿ ರಚನೆ ಮಾಡಲಾಗಿದೆ, ಈ ಮೂಲಕ  7.5 ಲಕ್ಷ ಜನತೆ ಕಾಂಗ್ರೆಸ್ ಸದಸ್ಯರಾಗಿದ್ದಾರೆ ಎಂದರು. ನಡಿಗೆ ಸಂದರ್ಭದಲ್ಲಿ ನಾಡಿನ ಜನತೆಯ ನಾಡಿ ಮಿಡಿತ ಪಕ್ಷದ ಮುಖಂಡರ ಗಮನಕ್ಕೆ ಬಂದಿದೆ ಎಂದ ಅವರು, ಬದಲಾಗಿರುವ ರಾಜಕೀಯ ಪರಿಸ್ಥಿತಿಗೆ ಅನುಗುಣವಾಗಿ ಕಾಂಗ್ರೆಸ್ ಕೂಡ ಬದಲಾಗಬೇಕಿದೆ, ಕಾರ್ಯಕರ್ತರು  ಜನರ ಕಷ್ಟ-ಸುಖಃಕ್ಕೆ ಸ್ಪಂದಿಸಬೇಕಿದೆ ಎಂದು ಸಲಹೆ ಮಾಡಿದರು.~ನಡಿಗೆ~ಯನ್ನು ಯಶಸ್ವಿಗೊಳಿಸುವಲ್ಲಿ ಮುಂದಾಳತ್ವ ವಹಿಸಿದ್ದ ಹಿರಿಯ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದರು.ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್, ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಮತ್ತಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.