ಮಂಗಳವಾರ, ಜನವರಿ 28, 2020
29 °C

ಕಾಂಗ್ರೆಸ್‌ನಿಂದ ಸಾಮಾಜಿಕ ತಾರತಮ್ಯ: ಸಂಗಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಬುರ್ಗಾ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜನವಿರೋಧಿ ಹಾಗೂ ಸಾಮಾ­ಜಿಕ ತಾರತಮ್ಯ ನೀತಿಯನ್ನು ಅನುಸರಿಸುವ ಮೂಲಕ ಅಸಮಾನತೆಯನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಗಣ್ಣ ಕರಡಿ ಹೇಳಿದರು.ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯ­ಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿಗೆ ಜನರು ಬೆಂಬಲಿಸುತ್ತಿದ್ದಾರೆ ಎಂದರು.ತಾರತಮ್ಯ ನೀತಿಯನ್ನು ಅನುಸರಿಸುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಇನ್ನೂ ಒಂದು ವರ್ಷ ತುಂಬುವ ಮೊದಲೇ ಆಂತರಿಕ ಬಿಕ್ಕಟ್ಟು ಶುರುವಾಗಿದೆ. ಯೋಜ­ನೆಗಳ ಅನುಷ್ಠಾನದಲ್ಲಿ ಪೂರ್ವ ವಿವೇಚನೆ ಇಲ್ಲದೇ ಸಾಮಾಜಿಕ ನ್ಯಾಯ ಉಲ್ಲಂಘನೆಯಾಗುತ್ತಿದೆ. ಇಂತಹ ಜನವಿರೋಧಿ ಸರ್ಕಾರದ ಬಗ್ಗೆ ಬೇಸತ್ತಿರುವ ಜನತೆ ಕಾಂಗ್ರೆಸ್‌ ಬೆಂಬಲಿಸಿದ್ದಕ್ಕೆ ಪಶ್ಚಾತಾಪ ಪಡು­ತ್ತಿದೆ ಎಂದರು.ಕೊಪ್ಪಳ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪಾಟೀಲ, ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಶಂಕರ ಪಳೋಟಿ  ಹಾಗೂ ಇತರರು ಮಾತನಾಡಿದರು. ಯುವ ಮೋರ್ಚಾ ತಾಲ್ಲೂಕು ಘಟಕ  ಅಧ್ಯಕ್ಷ ಮಲ್ಲಿಕಾರ್ಜುನ ನರೆಗಲ್ಲ ಅಧ್ಯಕ್ಷತೆ ವಹಿಸಿದ್ದರು. ಶರಣಪ್ಪ ಹೊಸ್ಮನಿ, ಶರಣಪ್ಪ ಈಳಿಗೇರ, ಮಲ್ಲಿಕಾರ್ಜುನ ಗಡಗಿ, ವೀರಣ್ಣ ಹುಬ್ಬಳ್ಳಿ, ಸುರೇಶಗೌಡ ಶಿವನಗೌಡ, ಶರಣಪ್ಪ

ಇತರರು ಇದ್ದರು.

ಪ್ರತಿಕ್ರಿಯಿಸಿ (+)