ಸೋಮವಾರ, ಮೇ 17, 2021
30 °C

ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಸಿ. ಶುಕ್ಲಾ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ನಕ್ಸಲರ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ವಿ.ಸಿ. ಶುಕ್ಲಾ(85) ಮಂಗಳವಾರ ನಿಧನರಾದರು.ಇಂದು ಮಧ್ಯಾಹ್ನ 2.30ರ ಸುಮಾರಿಗೆ ಇಲ್ಲಿನ ವೇದಾಂತ ಮೆಡಿಸಿಟಿ ಆಸ್ಪತ್ರೆಯಲ್ಲಿ ನಿಧನರಾದರೆಂದು ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಳೆದ ಮೇ 25ರಂದು ಛತ್ತಿಸ್‌ಗಡದ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಡೆಸಿದ್ದ ದಾಳಿಯಲ್ಲಿ ಶುಕ್ಲಾ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಗುಡ್‌ಗಾವ್‌ನ  ವೇದಾಂತ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.