ಸೋಮವಾರ, ಮಾರ್ಚ್ 8, 2021
30 °C

ಕಾಂಗ್ರೆಸ್‌ ಅಭಿವೃದ್ಧಿ ಪರ ಪಕ್ಷ: ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್‌ ಅಭಿವೃದ್ಧಿ ಪರ ಪಕ್ಷ: ಜಾರಕಿಹೊಳಿ

ಬೆಳಗಾವಿ: ‘ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಮತ ಕೇಳಲು ಹೊರಟಿರುವ ಬಿಜೆಪಿಗೆ ಮತದಾರರು ಮರಳಾಗುವುದಿಲ್ಲ. ಬದಲಾಗಿ ಅಭಿವೃದ್ಧಿಪರ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ತಾಲ್ಲೂಕು ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿದ ಅವರು, ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಸಾಮಾಜಿಕ ತಳಹದಿಯಲ್ಲಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.ಕಾಂಗ್ರೆಸ್‌ ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ ಮಾತನಾಡಿದರು. ಈ ಸಂದರ್ಭದಲ್ಲಿ ಬಸವರಾಜ ಮೇಳೇದ, ನಾಗೇಶ ದೇಸಾಯಿ, ಅಡಿವೇಶ ಇಟಗಿ, ಉಮೇಶ ಖನಗಾವಿ, ಮಹಾಂತೇಶ ಅಲಹಾಬಾದಿ, ಶಶಿಕಲಾ ಯಲಿಗಾರ, ಉಳವಪ್ಪ ನಂದಿ, ಬಸವರಾಜ ಅರಳೀಕಟ್ಟಿ, ಆನಂದ ಪಾಟೀಲ, ಶ್ರೀಶೈಲ ಸೊಪ್ಪಡ್ಲ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.ಎಸ್.ಎಸ್.ಖಾದ್ರಿ, ಕಾಂಗ್ರೆಸ್‌ ಪಕ್ಷದ ನಗರ ಘಟಕದ ಅಧ್ಯಕ್ಷ ರಾಜು ಸೇಠ್, ರಾಜು ಅಂಕಲಗಿ, ಸಿ.ಸಿ.ಪಾಟೀಲ, ಯಲ್ಲಪ್ಪ ಡೊಕೋಳಕರ, ಯುವರಾಜ ಕದಂ, ಬಿ.ಕೆ.ಇಟಗಿ, ಶಿವನಗೌಡ ಪಾಟೀಲ, ಮುಷರಪ್ ಖಾದ್ರಿ, ಎಲ್.ಎಚ್.ಪಾಟೀಲ, ಅಶ್ವಿನಿ ಪಾಟೀಲ, ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.