ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ನಡೆಯಲಿರುವ ಆಂತರಿಕ ಚುನಾವಣೆಗೆ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಗಿದೆ.

ಈ ಚುನಾವಣೆಯಲ್ಲಿ 476 ಮತದಾರರು ಪಾಲ್ಗೊಳ್ಳಲಿದ್ದಾರೆ. ಈ ಮತದಾರರ ಕರಡು ಪ್ರತಿಗೆ ಆಕ್ಷೇಪಣೆಗಳಿದ್ದರೆ ಮಾರ್ಚ್ 7ರ ಒಂದು ಗಂಟೆ ಒಳಗೆ ಸಲ್ಲಿಸಬೇಕು. ಮಾರ್ಚ್ 9ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಎಐಸಿಸಿ ಚುನಾವಣಾ ಅಧಿಕಾರಿಗಳಾದ ಜಸ್ಪ್ರೀತ್ ಸಿಂಗ್ ಹಾಗೂ ನಿತಿನ್ ಕುಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಶುಕ್ರವಾರ ಸಂಜೆ 4 ಗಂಟೆ ಒಳಗೆ ನಾಮಪತ್ರ ಸಲ್ಲಿಸಬೇಕು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣವಾದ ನಂತರ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಮಾರ್ಚ್ 10 ರಿಂದ 12ರವರೆಗೆ ಪ್ರಚಾರಕ್ಕೆ ಅವಕಾಶ ದೊರೆಯಲಿದ್ದು, ಮಾರ್ಚ್ 13ರಂದು ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.