ಶನಿವಾರ, ಜನವರಿ 18, 2020
25 °C

ಕಾಂಗ್ರೆಸ್‌ ಜತೆ ಮೈತ್ರಿ ಇಲ್ಲ : ಕರುಣಾನಿಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): ಮುಂಬ­ರುವ ಲೋಕ­ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿ ಕೊಳ್ಳುವುದಿಲ್ಲ  ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಹೇಳಿದ್ದಾರೆ.ಭಾನುವಾರ ನಡೆದ ಡಿಎಂಕೆ ಕಾರ್ಯ­ಕರ್ತರ ಸಭೆಯಲ್ಲಿ ಕಾಂಗ್ರೆಸ್‌ ವಿರೋಧಿ ಭಾವನೆ ಪ್ರತಿ­ಧ್ವನಿಸಿತು. ಬಿಜೆಪಿ ಜೊತೆಗೂ ಮೈತ್ರಿ ಸಾಧ್ಯವಿಲ್ಲ. ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಡಿಎಂಕೆ ಪಕ್ಷ ಮೈತ್ರಿಯನ್ನು ಹೊಂದಿತ್ತು. ಆದರೆ ಪ್ರಸ್ತುತ ನಾಯಕತ್ವ ಬೇರೆಯಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಪ್ರತಿಕ್ರಿಯಿಸಿ (+)