ಶುಕ್ರವಾರ, ಜೂನ್ 18, 2021
23 °C
ಆಯಾರಾಂ ಗಯಾರಾಂ

ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸತ್ಪಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಉತ್ತರಾಖಂಡ ಗರ್ವಾಲ್‌ ಕ್ಷೇತ್ರದ ಕಾಂಗ್ರೆಸ್‌ನ ಹಾಲಿ ಸಂಸದ ಸತ್ಪಾಲ್‌ ಮಹಾರಾಜ್‌ ಶುಕ್ರವಾರ ಇಲ್ಲಿ ಬಿಜೆಪಿ ಸೇರಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್‌ ಅವರು ಮಹಾ­ರಾಜ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.‘ಉತ್ತರಾಖಂಡದಲ್ಲಿ ಕಳೆದ ವರ್ಷ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ತೊಂದರೆಗೀಡಾದವರನ್ನು ಕಾಂಗ್ರೆಸ್‌ ಸಂಪೂರ್ಣ­ವಾಗಿ ನಿರ್ಲಕ್ಷಿಸಿದೆ ಮತ್ತು ಸದ್ಯ ದೇಶಕ್ಕೆ ಉತ್ತಮ ನಾಯಕತ್ವದ ಅಗತ್ಯವಿದೆ’ ಎಂದು ಪಕ್ಷ ಸೇರಿದ ನಂತರ ಸತ್ಪಾಲ್‌  ತಿಳಿಸಿದರು.ಉತ್ತರಾಖಂಡದಲ್ಲಿ ಧಾರ್ಮಿಕ ಮುಖಂಡರೆಂದೇ ಗುರುತಿಸಿ­ಕೊಂಡಿರುವ ಸತ್ಪಾಲ್‌ ಅವರು ದೊಡ್ಡ ಬೆಂಬಲಿಗರ ಪಡೆ ಹೊಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.