ಬುಧವಾರ, ಜೂನ್ 16, 2021
21 °C

ಕಾಂಗ್ರೆಸ್‌, ಬಿಜೆಪಿಯಿಂದ ಭ್ರಮನಿರಸನ: ಬೇವಿನಮರದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಕಾಂಗ್ರೆಸ್‌, ಬಿಜೆಪಿ ಪೊಳ್ಳು ಭರವಸೆಯಿಂದ ಬೇಸತ್ತಿರುವ ಹಾವೇರಿ ಲೋಕಸಭಾ ಕ್ಷೇತ್ರದ ಮತದಾರರು ಪ್ರಸಕ್ತ ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲಿಸಿದ್ದಾರೆ ಎಂದು ಜಾತ್ಯತೀತ ಜನತಾದಳ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬೇವಿನಮರದ ಹೇಳಿದರು.ಗುರವಾರ ನಗರದ ಮೆಣಸಿನ ಕಾಯಿ ಆರ್ಕೇಡ್‌ದಲ್ಲಿ ಜೆಡಿಎಸ್‌ ಚುನಾವಣಾ ಪ್ರಚಾರದ ಕಾರ್ಯಾ ಲಯ ಉದ್ಘಾಟಿಸಿದ ನಂತರ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.ಮತದದಾರು ಕಾಂಗ್ರೆಸ್‌ ಮತ್ತು ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ಕೊಟ್ಟು ನೋಡಿದ್ದಾರೆ. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‌, ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಹಾಗೂ ಈ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಸಾಮಾನ್ಯ ಜನರ ಅಭಿವೃದ್ಧಿ ಅಸಾಧ್ಯ ಎಂಬುದು ಜನರಿಗ ಮನವರಿಕೆಯಾಗಿದೆ ಎಂದರು.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಅಧಿಕಾರವಧಿಯಲ್ಲಿ ಮಾಡಿರುವ ಜನಪರ ಕೆಲಸಗಳ ಬಗ್ಗೆ ಜನರಲ್ಲಿ ಈಗಲೂ ಒಲವು ಇದ್ದು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಭರವಸೆಯೊಂದಿಗೆ ಹಾವೇರಿ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನಾಗಿ ದಿ. ಬಿ.ಎಂ.ಮೆಣಸಿನಕಾಯಿ ಅವರ ಪುತ್ರ ರವಿ ಮೆಣಸಿನಕಾಯಿ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಹೇಳಿದರು.ಕುಮಾರಸ್ವಾಮಿ, ದೇವೇಗೌಡರು ಹಾಗೂ ಸಂಸದರಾಗಿದ್ದ ಬಿ.ಎಂ.ಮೆಣಸಿನಕಾಯಿ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳೇ ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.ಜಿಲ್ಲೆಯಲ್ಲಿ ಈ ಹಿಂದೆ ಪಕ್ಷದ ಸಂಘಟನೆಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯುಂಟಾಗಿತ್ತು. ಈಗ ಮತ್ತೆ ಚುರುಕುಗೊಂಡಿದ್ದು, ಈ ಹಿಂದೆ ಪಕ್ಷದ ಸಂಘಟನೆಯಿಂದ ದೂರ ಉಳಿದವರೆಲ್ಲ ಪಕ್ಷಕ್ಕೆ ಮರಳಿದ್ದಾರೆ. ಹೊಸ ಹುಮ್ಮಸ್ಸಿನೊಂದಿಗೆ ಪಕ್ಷದ ಸಂಘಟನೆ ಜತೆಗೆ ಪಕ್ಷದ ಅಭ್ಯರ್ಥಿ ಗೆಲುವಿಗೆ ಪ್ರತಿಯೊಬ್ಬರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಡಿ.ಎಸ್‌.ಮಾಳಗಿ ಮಾತನಾಡಿ, ಜಿಲ್ಲೆಯಲ್ಲಿರುವ ಎಸ್‌ಸಿ, ಎಸ್ಟಿ ಜನಾಂಗಕ್ಕೆ ಕಾಂಗ್ರೆಸ್‌,ಬಿಜೆಪಿ ಪಕ್ಷಗಳು ಅನ್ಯಾಯ ಮಾಡಿದ್ದು, ಜನರು ಎರಡೂ ಪಕ್ಷಗಳಿಗೆ ಈ ಜನಾಂಗದ ಮತ ಕೇಳುವ ನೈತಿಕ ಹಕ್ಕಿಲ್ಲ. ಈ ಜನರು ಈ ಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.ಹಾವೇರಿ ಲೋಕಸಭಾ ಜೆಡಿಎಸ್‌ ಅಭ್ಯರ್ಥಿ ರವಿ ಮೆಣಸಿನಕಾಯಿ ಮಾತನಾಡಿ, ತಮ್ಮ ತಂದೆ ದಿ.ಬಿ.ಎಂ.ಮೆಣಸಿನಕಾಯಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಮಾಡದೇ ಉಳಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿ ದ್ದೇನೆ. ವರಿಷ್ಠರು ತಮ್ಮ ಮೇಲೆ ವಿಶ್ವಾಸ ವಿಟ್ಟು ಟಿಕೇಟ್‌ ನೀಡಿದ್ದಾರೆ. ಆ ವಿಶ್ವಾಸಕ್ಕೆ ಧಕ್ಕೆ ಬರದಂತೆ ಕೆಲಸ ಮಾಡುವೆ ಎಂದರು.ಬರುವ ಸೋಮವಾರ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ತಮ್ಮ ತಂದೆಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲಾ ಗುವುದು ಎಂದು ತಿಳಿಸಿದರು.ಅಲ್ಪ ಸಂಖ್ಯಾತರ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಖ್ವಾಜಾಮೊಹದ್ದೀನ್‌ ಅಣ್ಣಿಗೇರಿ, ಮಂಜುನಾಥ ಗೌಡಶಿವಣ ್ಣ ವರ, ಮುಖಂಡರಾದ ಉಮೇಶ ತಳವಾರ, ಶಿವು ಹೂಗಾರ, ಎಂ.ಎಚ್‌. ದೊಡ್ಡಮನಿ, ಶೇಖಪ್ಪ ಕಳ್ಳಮನಿ, ಮುನವರುದ್ದೀನ್‌ ಜಿ.ಕಮದೋಡ ಮತ್ತಿತತರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.