ಸೋಮವಾರ, ಜೂನ್ 21, 2021
26 °C
ಸಂಚಲನ ಮೂಡಿಸಿದ ಫೇಸ್‌ಬುಕ್‌ ಸಂದೇಶ

ಕಾಂಗ್ರೆಸ್‌ ಬೆಂಬಲಿಸಲು ಬಿಜೆಪಿ ಶಾಸಕ ಮನವಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ: ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಸವರಾಜ ಹಿಟ್ನಾಳ ಅವರನ್ನು ಬೆಂಬಲಿಸುವಂತೆ ಸ್ಥಳೀಯ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ ಅವರ ಹೆಸರಿನಲ್ಲಿ ಕುರುಬ ಜನಾಂಗದವರಿಗೆ ಮನವಿ ಮಾಡಿರುವ ಫೇಸ್‌ಬುಕ್‌ ಸಂದೇಶ ತಾಲ್ಲೂಕು ಸೇರಿದಂತೆ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದೆ.ಅಲ್ಲದೇ ಈ ಫೇಸ್‌ಬುಕ್‌ ಪುಟದಲ್ಲಿ ದೊಡ್ಡನಗೌಡ ಪಾಟೀಲರೊಂದಿಗೆ ಮಾಜಿ ಶಾಸಕ ಕಾಂಗ್ರೆಸ್‌ನ ಹಸನ್‌­ಸಾಬ್‌ ದೋಟಿಹಾಳ ಅವರ ಚಿತ್ರವೂ ಸಹ ಇರುವುದು ಅಚ್ಚರಿ ಮೂಡಿಸಿದೆ. ಬಸವರಾಜ ಹಿಟ್ನಾಳ ಮತ್ತು ದೊಡ್ಡನ­ಗೌಡ ಪಾಟೀಲ ಇಬ್ಬರೂ ಕುರುಬ ಜನಾಂಗಕ್ಕೆ ಸೇರಿರುವುದರಿಂದ ಚರ್ಚೆಗೆ ಗ್ರಾಸ ವಾಗಿದೆ. ಈ ಸಂದೇಶ ಮೊಬೈ­ಲ್‌ಗಳ ಮೂಲಕವೂ ಹರಿದಾಡುತ್ತಿ­ರುವುದು ಶಾಸಕ ಪಾಟೀಲರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಲ್ಲಗಳೆದ ಶಾಸಕ ದೊಡ್ಡನಗೌಡ, ಫೇಸ್‌ಬುಕ್‌ ಸಂದೇ­ಶಕ್ಕೂ ನನಗೂ ಸಂಬಂಧವಿಲ್ಲ. ಇದೊಂದು ವ್ಯವಸ್ಥಿತ ಪಿತೂರಿಯಾ­ಗಿದೆ. ಚುನಾವಣೆ ಸಂದರ್ಭದಲ್ಲಿ ಸಾಮಾ­ಜಿಕ ಜಾಲ ತಾಣವನ್ನು ದುರು­ಪಯೋಗ ಪಡಿಸಿಕೊಳ್ಳಲಾ­ಗಿದ್ದು, ಕುರುಬ ಸಮಾಜ ಮತ್ತು ಬಿಜೆಪಿ ಬೆಂಬಲಿಗರನ್ನು ದಾರಿತಪ್ಪಿಸುವ ತಂತ್ರ­ವಾ­ಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೇ ಈ ಫೇಸ್‌ಬುಕ್‌ ಖಾತೆ ನಕಲಿಯಾಗಿದ್ದು ಅದನ್ನು ಸೃಷ್ಟಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಇಲ್ಲಿಯ ಪೊಲೀಸ್‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಮೂಲಕ ಸೈಬರ್‌ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿರುವುದಾಗಿ ಪಾಟೀಲ ತಿಳಿಸಿದರು.

ಸಾಮಾಜಿಕ ಜಾಲತಾಣದ ಮೂಲಕ ಈ ರೀತಿ ವದಂತಿ ಹಬ್ಬಿಸಿರು­ವುದರಿಂದ ನಾನು ಮುಜುಗರ ಅನುಭವಿಸುವಂತಾಗಿದೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗು­ತ್ತದೆ. ಹಾಗಾಗಿ ನಕಲಿ ಫೇಸ್‌ಬುಕ್‌ನ ವದಂತಿಗೆ ಕಿವಿಗೊಡಬಾರದು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.ನಾನು ಬಿಜೆಪಿಗೆ ನಿಷ್ಠನಾಗಿದ್ದು, ಪಕ್ಷಕ್ಕೆ ಎಂದೂ ದ್ರೋಹ ಬಗೆಯು­ವುದಿಲ್ಲ. ಆದರೂ ನನ್ನ ಹೆಸರಿಗೆ ಮಸಿ ಬಳಿಯುವ ಕುತಂತ್ರ ನಡೆಯುತ್ತಿದೆ. ಈ ಕೃತ್ಯದಲ್ಲಿ ಯಾರ ಕೈವಾಡ ಇದೆ ಎಂಬುದು ತನಿಖೆ ನಂತರ ತಿಳಿದುಬರಲಿದೆ ಎಂದರು.

ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಶಿಧರ ಕವಲಿ ಮತ್ತಿತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.