ಕಾಂಗ್ರೆಸ್ ಮುಖಂಡನ ಮೇಲೆ ಗುಂಡಿನ ದಾಳಿ

ಹೈದರಾಬಾದ್ : ತೆಲಂಗಾಣದ ಕಾಂಗ್ರೆಸ್ ಮುಖಂಡ ಯಾದಗಿರಿ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಶನಿವಾರ ಗುಂಡಿನ ದಾಳಿ ನಡೆಸಿದ್ದಾರೆ.
ಎರಡು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು 6 ಸುತ್ತು ಗುಂಡು ಹಾರಿಸಿದ್ದಾರೆ. ಯಾದಗಿರಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಭೂ ವಿವಾದಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ಡೆಕ್ಕನ್ ಬಾಬು ಮತ್ತು ಆತನ ಸಹಚರರು ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.