ಬುಧವಾರ, ಜೂನ್ 23, 2021
29 °C

ಕಾಂಗ್ರೆಸ್‌ ಸೇರಲ್ಲ: ಯೋಗೇಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ‘ಕಾಂಗ್ರೆಸ್ ಪಕ್ಷ­ವನ್ನು ಸೇರುವ ಯಾವುದೇ ಯೋಚನೆ ಇಲ್ಲ’ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಸ್ಪಷ್ಟ­ಪಡಿ­ಸಿದರು.ಭಾನುವಾರ ತಾಲ್ಲೂಕಿನ ಕೋಡಂಬ­ಹಳ್ಳಿಯಲ್ಲಿ ಸುದ್ದಿಗಾರ­ರೊಂದಿಗೆ ಮಾತ­ನಾಡಿದ ಅವರು, ‘ಲೋಕಸಭಾ ಚುನಾ­ವಣೆಯ ಹಿನ್ನೆಲೆಯಲ್ಲಿ ನಾನು ಕಾಂಗ್ರೆಸ್‌ ಸೇರುತ್ತೇನೆ ಎಂಬುದು ಕೇವಲ ಉಹಾಪೋಹ’ ಎಂದರು.‘ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರು ನನ್ನನ್ನು ಸಂಪರ್ಕಿಸಿ ಪಕ್ಷಕ್ಕೆ ಆಹ್ವಾನ ನೀಡಿರುವುದು ನಿಜ. ಆದರೆ ಸದ್ಯಕ್ಕೆ ಯಾವುದೇ ಪಕ್ಷಕ್ಕೆ ಹೋಗು­ವುದಿಲ್ಲ. ಯಾವುದೇ ಕಾರಣಕ್ಕೂ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿ­ಸು­ವುದಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಯಾರು ಸಹಾಯ ಮಾಡುತ್ತಾರೋ ಆ ಪಕ್ಷವನ್ನು ಮುಂದಿನ ಲೋಕಸಭಾ ಚುನಾವಣೆ­ಯಲ್ಲಿ ಬೆಂಬಲಿಸು­ತ್ತೇನೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.