ಭಾನುವಾರ, ಮೇ 16, 2021
24 °C

ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಲಘಟ್ಟಪುರ: ಕನಕಪುರ ರಸ್ತೆಯ ಆಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಬಿಜೆಪಿ ಕಾರ್ಯಕರ್ತರು ಪಂಚಾಯಿತಿಯ ಮಾಜಿ ಸದಸ್ಯರಾದ ಟಿ.ಟಿ.ವೆಂಕಟೇಶ, ಎಲ್.ಕೋದಂಡರಾಮಯ್ಯ, ವಿಎಸ್‌ಎಸ್‌ಎನ್ ಬ್ಯಾಂಕ್ ನಿರ್ದೇಶಕ ಬಸವರಾಜು ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಲಕ್ಷ್ಮಿಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ವಕ್ತಾರ ಎಸ್.ಟಿ.ಸೋಮಶೇಖರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬಿಬಿಎಂಪಿ ಸದಸ್ಯ ಎಸ್.ಗಂಗಾಧರ್, ತಾ.ಪಂ.ಮಾಜಿ ಅಧ್ಯಕ್ಷ ಚಂದ್ರಶೇಖರ್, ಮಾಜಿ ಉಪಾಧ್ಯಕ್ಷ ಅಶ್ವತ್ಥ ನಾಯಕ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಲ್.ಗೋಪಾಲಕೃಷ್ಣಗೌಡ, ಗ್ರಾ.ಪಂ.ಉಪಾಧ್ಯಕ್ಷ ಪರ್ವೇಜ್ ಅಹಮದ್, ಮಾಜಿ ಅಧ್ಯಕ್ಷ ಟಿ.ನಾರಾಯಣಪ್ಪ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಷಣ್ಮುಖ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.