ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಾಹಿತಿ ಸಂಗ್ರಹ

7

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಾಹಿತಿ ಸಂಗ್ರಹ

Published:
Updated:

ಚಳ್ಳಕೆರೆ: `ಮುಂಬರುವ ಲೋಕಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಆಯಾ ಕ್ಷೇತ್ರದ ಶಾಸಕರ ಹಾಗೂ ಪಕ್ಷದ ಮುಖಂಡರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಸಮಗ್ರ ವರದಿಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ಸಲ್ಲಿಸಲಾ ಗುತ್ತದೆ' ಎಂದು ವೀಕ್ಷಕರಾದ ಮಾಜಿ ಸಚಿವ ಎಂ.ಎನ್.ನಬಿಸಾಬ್ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರಕ್ಕೆ ಭಾನುವಾರ ಬಂದಿದ್ದ ಅವರು, ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಮಾಹಿತಿ ಸಂಗ್ರಹಿಸಿದರು.ಕಾರ್ಯಕರ್ತರು ಕೆಪಿಸಿಸಿ ಸದಸ್ಯ ಡಾ.ಬಿ.ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

ಬಳಿಕ ನಬಿ ಅವರು ಟಿಕೆಟ್ ಆಕಾಂಕ್ಷಿ ಡಾ.ಬಿ.ತಿಪ್ಪೇಸ್ವಾಮಿ, ಎಂ.ರಾಮಪ್ಪ, ಬಿ.ಪಿ.ಪ್ರಕಾಶಮೂರ್ತಿ ಪರ ನೀಡಿದ ಮನವಿಗಳನ್ನು ಸ್ವೀಕರಿಸಿದರು.ಕೆಪಿಸಿಸಿ ಉಪಾಧ್ಯಕ್ಷ ಆನಂದ್‌ಕುಮಾರ್, ವಿಧಾನ ಪರಿಷತ್ ಸದಸ್ಯ ನಾಗರಾಜ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಕೆಪಿಸಿಸಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎ.ಸೇತೂರಾಂ, ಕಾಂಗ್ರೆಸ್ ಮುಖಂಡ ಟಿ.ಪ್ರಭುದೇವ್, ಕೆಪಿಸಿಸಿ ಸದಸ್ಯ ಸಿ.ವೀರಭದ್ರ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಪ್ರಧಾನ ಕಾರ್ಯದರ್ಶಿ ಪಿ.ತಿಪ್ಪೇಸ್ವಾಮಿ, ಪುರಸಭಾ ಸದಸ್ಯರಾದ ಪೊಲೀಸ್ ವೀರಣ್ಣ, ಸಲೀಂ, ಅಶ್ರಫ್  ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry