ಶನಿವಾರ, ಜೂನ್ 19, 2021
26 °C

ಕಾಂಗ್ರೆಸ್ ನಾಯಕಿ ಮೋಟಮ್ಮ ಆರೋಪ:ಡಿವಿಎಸ್ ಕುರ್ಚಿ ಹೊಂದಾಣಿಕೆ ರಾಜಕೀಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ರಹ್ಮಾವರ: `ಅಸಾಯಕರಾದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರದ್ದು ಕೇವಲ ಕುರ್ಚಿಗಾಗಿ ಹೊಂದಾಣಿಕೆ ಮಾಡಿಕೊಳ್ಳುವ ರಾಜಕೀಯ. ಅಧಿಕಾರಿಗಳ ಮೇಲೆ ಹಿಡಿತ ಕಳಕೊಂಡಿರುವ ಸರ್ಕಾರದಿಂದ ಇಂದು ಯಾವುದೇ ಕೆಲಸವಾಗುತ್ತಿಲ್ಲ~ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಆರೋಪಿಸಿದರು.ಸಾಲಿಗ್ರಾಮ ಗಣೇಶ ಕಲ್ಯಾಣ ಮಂಟಪದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.`ಸದಾನಂದ ಗೌಡರು ಅಸಹಾಯಕರಾಗಿದ್ದಾರೆ. ಆರ್.ಎಸ್.ಎಸ್. ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮತಿ ಪಡೆದೇ ಅವರು ಕೆಲಸ ಮಾಡಬೇಕಾಗಿದೆ. ಸ್ವಂತ ನಿರ್ಣಯ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ~ ಎಂದರು.`ಸರ್ಕಾರದ ಸಚಿವರು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಬರಗಾಲ ಬಂದು  ಬೆಳೆ ಒಣಗಿ ಹೋಗಿದೆ, ಕುಡಿಯಲು ನೀರಿಲ್ಲ ಎಂದು ಕಾಂಗ್ರೆಸ್ ಪಕ್ಷದ ಶಾಸಕರು ಸದನದಲ್ಲಿ ಚರ್ಚೆ ಮಾಡುವಾಗ ಬಿಜೆಪಿಯ ಮೂವರು ಶಾಸಕರು ಬ್ಲೂಫಿಲ್ಮ್ ನೋಡುತ್ತಿದ್ದರು. ಇಂತವರಿಗೆ ಈ ನಾಡಿನ ಜನತೆಯ ಬಗ್ಗೆ ಕಾಳಜಿ ಎಲ್ಲಿದೆ?~ ಎಂದು ಅವರು ಪ್ರಶ್ನಿಸಿದರು.ಸಭೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ಸಿನ ಕಾರ್ಯದರ್ಶಿ ಶ್ಯಾಮಲ ಭಂಡಾರಿ, ಬ್ಲಾಕ್ ಕಾಂಗ್ರೆಸ್ಸಿನ  ಕಾರ್ಯದರ್ಶಿ ಗೋಪಾಲ ಬಂಗೇರ, ಕೋಟ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಕಿಶೋರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಂಕರ್ ಕುಂದರ್, ತಿಮ್ಮ ಪೂಜಾರಿ, ತಾ.ಪಂ ಸದಸ್ಯೆ ರೋಶನಿ ಒಲಿವೇರಾ, ಸಾಸ್ತಾನ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರತಾಪ್ ಶೆಟ್ಟಿ, ಸ್ಥಾನೀಯ ಸಮಿತಿ ಅಧ್ಯಕ್ಷ ಅಚ್ಚುತ ಪೂಜಾರಿ, ವಡ್ಡರ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವು ಭಂಡಾರಿ, ಪಾಂಡೇಶ್ವರ ಗ್ರಾ.ಪಂ ಅಧ್ಯಕ್ಷ ವಿಠಲ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಫ್ರಫ್ಲ್ಲುಲ ಕೃಷ್ಣ, ಕೋಟ ಸಿ.ಎ.ಬ್ಯಾಂಕ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.