ಸೋಮವಾರ, ಜೂನ್ 14, 2021
22 °C

ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರದಿಂದ ಭ್ರಷ್ಟಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಿಂದ ಭ್ರಷ್ಟಾಚಾರ ಮಾತ್ರ ನಡೆದಿದೆ ಎಂದು ಬಿಜೆಪಿ ನಿಯೋಜಿತ ಅಭ್ಯರ್ಥಿ ಬಿ.ಎನ್‌.ಬಚ್ಚೇಗೌಡ ಹೇಳಿದರು.

ತಾಲ್ಲೂಕಿನ ಅಣಕನೂರಿನಲ್ಲಿ ಸೋಮವಾರ ನಡೆದ ಬಿಜೆಪಿ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕೇಂದ್ರದಲ್ಲಿನ ಯುಪಿಎ ಸರ್ಕಾರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬರೀ ಭರವಸೆಗಳು ನೀಡುವುದ­ರಲ್ಲಿ ಕಾಲ ಕಳೆಯುತ್ತಿವೆಯೇ ಹೊರತು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು.ಗುಜರಾತ್‌ ಅನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿಸಿರುವ ನರೇಂದ್ರ ಮೋದಿ­ಯವರು ದೂರದೃಷ್ಟಿಯುಳ್ಳವರು. ಪಕ್ಷದ ಗೆಲುವಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಅವರು ತಿಳಿಸಿದರು.ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಚಾಲನೆ ನೀಡಿದರು. ಬಡವರು ಮತ್ತು ಮಹಿಳೆಯರ ಪರ ಹಲವಾರು ಯೋಜನೆಗಳನ್ನು ರೂಪಿಸಿದರು. ಅವರ ಅಭಿವೃದ್ಧಿ ಕಾರ್ಯಗಳು ನಮಗೆ ಮಾರ್ಗದರ್ಶಿ ಎಂದರು.ಬಿಜೆಪಿ ಮುಖಂಡರಾದ ಅಗಲಗುರ್ಕಿ ಚಂದ್ರಶೇಖರ್‌, ತಮ್ಮೇಶಗೌಡ, ಎ.ವಿ.ಬೈರೇಗೌಡ, ಸುಬ್ಬರಾಜು, ಶ್ರೀನಿವಾಸರೆಡ್ಡಿ, ಹನುಮೇಗೌಡ, ಶ್ರೀನಿವಾಸ್‌, ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.