ಬುಧವಾರ, ಮೇ 18, 2022
23 °C

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಜೇವರ್ಗಿ ತಾಲ್ಲೂಕಿನ ಬೀಳವಾರ ಗ್ರಾಮದಲ್ಲಿ ಈಚೆಗೆ  ಗ್ರಾಮದ ಯುವ ಮುಖಂಡ ಚಂದ್ರಶೇಖರ ಸೇರಿದಂತೆ ನೂರಾರು ಯುವಕರು ಜೆಡಿಎಸ್, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಮುಖಂಡ ಡಾ.ಅಜಯ್‌ಸಿಂಗ್ ಅವರ ಸಮ್ಮುಖದಲ್ಲಿ ಮಹೇಶಕುಮಾರ, ಶಿವಶರಣ, ಜಟ್ಟೆಪ್ಪ, ಶರೀಫಸಾಬ, ಮಹಿಬೂಬ, ಪರಶುರಾಮ, ಹಣಮಂತ ಹಾಗೂ ಇತರರು ಕಾಂಗ್ರೇಸ್‌ಗೆ ಸೇರ್ಪಡೆಯಾಗಿದ್ದಾರೆ.ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಿಂಗಣ್ಣ ನೀರಡಗಿ, ವಿಧಾನ ಪರಿಷತ್ತಿನ ಸದಸ್ಯ ಅಲ್ಲಂಪ್ರಭು ಪಾಟೀಲ, ಕಾಸಿಂ ಪಟೇಲ ಮುದಬಾಳ, ಶಿವಶರಣಪ್ಪ ಕೋಬಾಳ, ಗುರುಲಿಂಗಪ್ಪಗೌಡ ಆಂದೋಲಾ, ಶಿವರಾಜ ಪಾಟೀಲ ರದ್ದೇವಾಡಗಿ ಇತರರು ಇದ್ದರು ಎಂದು ಬ್ಲಾಕ್ ಕಾಂಗ್ರೇಸ್ ಸಮಿತಿ ಜೇವರ್ಗಿ ಘಟಕದ ಅಧ್ಯಕ್ಷ ನಿಂಗಣ್ಣ ನೀರಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.