ಶುಕ್ರವಾರ, ಮೇ 27, 2022
21 °C

ಕಾಂಗ್ರೆಸ್ ಪರಿಶಿಷ್ಟ ಘಟಕದ ಜಿಲ್ಲಾ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ದೇವನಹಳ್ಳಿ ವಿಧಾನ ಸಭೆ ಕ್ಷೇತ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಜೂನ್ 22ರಂದು ಪರಿಶಿಷ್ಟ ಜಾತಿ ಘಟಕ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಎನ್.ಮಂಜುನಾಥ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪ್ರಧಾನ ಕಾರ್ಯದರ್ಶಿ ಬುಳ್ಳಹಳ್ಳಿ ರಾಜಪ್ಪ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‌ನ ಜಿಲ್ಲಾ ಹಾಗೂ ತಾಲ್ಲೂಕು ಪರಿಶಿಷ್ಟ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ಜನರ ಕುಂದು ಕೊರತೆ ಪರಿಶೀಲಿಸಲು ಮತ್ತು ಪಕ್ಷದ ವರ್ಚಸ್ಸು ವೃದ್ಧಿಸಲು ಈ ಪ್ರವಾಸ ನಡೆಸಲಾಗುತ್ತಿದೆ ಎಂದರು.ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಎ.ಚಿನ್ನಪ್ಪ ಮಾತನಾಡಿ, ರಾಜ್ಯದಲ್ಲಿರುವ 36 ಮೀಸಲು ಕ್ಷೇತ್ರದಲ್ಲಿ ಪ್ರವಾಸ ನಡೆಸಲಾಗುವುದು. ಕಾಂಗ್ರೆಸ್ ಹಾಗೂ ಇತರೆ ಸಮುದಾಯದ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಈ ಪ್ರವಾಸದಲ್ಲಿ ಭಾಗಿಯಾಗುವರು. ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆ,  ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಕಾಂಗ್ರೆಸ್ ಪರಿಶಿಷ್ಟ ವಿಭಾಗವೂ ಸೇರಿದಂತೆ ಪಕ್ಷದ ಎಲ್ಲಾ ಘಟಕಗಳ ಮುಖಂಡರು  ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷ ನೆಲಮಂಗಲ ದೀಪಕ್ ಕಿರಣ್ ಹಾಗೂ ದೊಡ್ಡಬಳ್ಳಾಪುರ ಮಹೇಶ್, ದೊಡ್ಡಬಳ್ಳಾಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂಜನಾಮೂರ್ತಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಮುನಿರಾಜು, ಕಾಂಗ್ರೆಸ್ ಎಸ್ಸಿ ಘಟಕದ ರಾಜ್ಯ ಸಂಚಾಲಕ ಚಂದೇನಹಳ್ಳಿ ಮುನಿಯಪ್ಪ, ತಾ.ಪಂ.ಮಾಜಿ ಅಧ್ಯಕ್ಷ ನಾರಾಯಣ ಸ್ವಾಮಿ, ದೇವನಹಳ್ಳಿ ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ಪ್ರಕಾಶ್, ವಿಜಯಪುರ ಪಟ್ಟಣ ಬ್ಲಾಕ್ ನಾರಾಯಣ ಸ್ವಾಮಿ, ಚನ್ನರಾಯಪಟ್ಟಣ ಹೋಬಳಿ ಡೇವಿಡ್ ನಾರಾಯಣ, ವಿಜಯಪುರ ಹೋಬಳಿ ಬ್ಲಾಕ್‌ನ ಮುನಿರಾಜ್, ಕಸಬಾ ಹೋಬಳಿ ವೆಂಕಟೇಶ್, ಕುಂದಾಣ ಹೋಬಳಿ ಮುನಿರಾಜ್, ಕಿಸಾನ್ ಮಜ್ದೂರ್ ಖೇತ್ ಕಾಂಗ್ರೆಸ್ ಘಟಕದ ಜಿಲ್ಲಾ ಅಧ್ಯಕ್ಷ ಕೃಷ್ಣಮೂರ್ತಿ, ಸುಮಿತ್ರಮ್ಮ, ಗುಂಡಮ್ಮ ಮತ್ತು ವಿನೋದಮ್ಮ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.