ಭಾನುವಾರ, ಏಪ್ರಿಲ್ 18, 2021
33 °C

ಕಾಂಗ್ರೆಸ್ ಪರಿಶಿಷ್ಟ ಮುಖಂಡರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 51 ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆ ಕುರಿತು ಚರ್ಚಿಸಲು ಗುರುವಾರ ರಾಜ್ಯ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಾಯಕರು, ಮುಖಂಡರ ಸಭೆ ನಡೆಯಲಿದೆ.

ಅರಮನೆ ರಸ್ತೆಯಲ್ಲಿರುವ ಏಟ್ರಿಯಾ ಹೋಟೆಲ್‌ನಲ್ಲಿ ಬೆಳಿಗ್ಗೆ 11.45ಕ್ಕೆ ಸಭೆ ಆರಂಭವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್.ಪಾಟೀಲ್, ಕೆಪಿಸಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ಅಧ್ಯಕ್ಷ ಎನ್.ಮಂಜುನಾಥ್ ಮತ್ತಿತರರು  ಪಾಲ್ಗೊಳ್ಳುವರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು, ವಿವಿಧ ಮುಖಂಡರು ಭಾಗವಹಿಸುತ್ತಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.