ಶುಕ್ರವಾರ, ಜೂನ್ 25, 2021
29 °C

ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೌರಿಬಿದನೂರು: ಸಮೃದ್ಧ, ಬಲಿಷ್ಠ ರಾಷ್ಟ್ರ ನಿರ್ಮಾಣ, ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.

ತಾಲ್ಲೂಕಿನ ಗಡಿಭಾಗದ ಎಲ್ಲೋಡು ಆದಿನಾರಾಯಣಸ್ವಾಮಿ ದೇಗುಲ­ದಲ್ಲಿ ಸೋಮವಾರ ಪೂಜೆ ಸಲ್ಲಿಸಿದ ನಂತರ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಪರ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅನೇಕ ಜನಪರ ಯೋಜನೆ ಜಾರಿಗೊಳಿಸಿದೆ. ಅಧಿ­ಕಾರಕ್ಕೆ ಬಂದ ಮೊದಲ ದಿನವೇ ಒಂದು ರೂಪಾಯಿಗೆ ಒಂದು ಕೆ.ಜಿ. ಅಕ್ಕಿ ನೀಡುವ ಯೋಜನೆ ಜಾರಿಗೊಳಿಸಲಾಯಿತು. ಪರಿಶಿಷ್ಟ ಜಾತಿ, ಪಂಗಡದವರು ಹೊಂದಿದ್ದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಬಾಕಿ ಹಾಗೂ ಬ್ಯಾಂಕ್ ಸಾಲ  ಮನ್ನಾ ಮಾಡಲಾಗಿದೆ. ಕುಡಿಯುವ ನೀರಿಗಾಗಿ ₨13 ಕೋಟಿ ವೆಚ್ಚ­ದಲ್ಲಿ ಎತ್ತಿನ ಹೊಳೆ ಯೋಜನೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.ಜಿಲ್ಲಾ ಪಂಚಾಯತಿ ಸದಸ್ಯ ಕೇಶವರೆಡ್ಡಿ ಮಾತನಾಡಿ, ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ, ನಿರಂತರ ವಿದ್ಯುತ್, ಸಾರಿಗೆ ವ್ಯವಸ್ಥೆ, ಬಡವರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಸಮುದಾಯ ಭವನಗಳನ್ನು ನಿರ್ಮಿಸ­ಲಾಗಿದೆ. ಕುಡಿಯುವ ನೀರು, ಚರಂಡಿ, ರಸ್ತೆ, ಬೀದಿ ದೀಪ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗಿದೆ ಎಂದರು.ಎಲ್ಲೋಡು ಆದಿನಾರಾಯಣಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಚೋಳಶೆಟ್ಟಿಹಳ್ಳಿ ತಾಂಡದಿಂದ ಪ್ರಚಾರ ಆರಂಭಿಸಿದರು. ಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಕೆ.ಸತೀಶ್ ಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ಲಾ, ಮುಖಂಡರಾದ ಮರಳೂರು ಹನುಮಂತರೆಡ್ಡಿ, ಎಚ್.ಎನ್.­ಪ್ರಕಾಶ್ ರೆಡ್ಡಿ, ವೆಂಕಟರವಣ, ವೇದಲವೇಣಿ ವೇಣು, ಪ್ರಮೀಳಾ ರಾಧಾಕೃಷ್ಣ ಮತ್ತಿತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.