ಮಂಗಳವಾರ, ಅಕ್ಟೋಬರ್ 22, 2019
22 °C

ಕಾಂಗ್ರೆಸ್ ಬಲವರ್ಧನೆಗೆ ಮುನಿಯಪ್ಪ ಕರೆ

Published:
Updated:

ಕುಶಾಲನಗರ: `ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಕ್ಷವನ್ನು ಹೊಸ ಹುರುಪಿನೊಂದಿಗೆ ಬೇರುಮಟ್ಟದಿಂದ ಬಲಗೊಳಿಸಬೇಕು~ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಇಲ್ಲಿ ಹೇಳಿದರು.ಕಾಂಗ್ರೆಸ್ ಪಕ್ಷದ ವತಿಯಿಂದ ಇಲ್ಲಿನ ಕನ್ನಿಕಾ ಇಂಟರ್‌ನ್ಯಾಷನಲ್ ಸಭಾಂಗಣ ದಲ್ಲಿ ಸೋಮವಾರಪೇಟೆ ಮತ್ತು ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಕೇಂದ್ರವು ರಸ್ತೆ, ವಿದ್ಯುತ್, ದೂರವಾಣಿ ಮತ್ತು ರೈಲ್ವೆ ಸೇವೆ ಸೇರಿದಂತೆ ಹಲವು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಶೇ.80 ರಷ್ಟು ಅನುದಾನವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಯಾವುದೇ ಅನುದಾನವನ್ನು ಸಮರ್ಪಕವಾಗಿ ಬಳಸುತ್ತಿಲ್ಲ ಎಂದು ದೂರಿದರು.ಸಂಸದ ಎಚ್.ವಿಶ್ವನಾಥ್ ಮಾತ ನಾಡಿ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ದುರಾಡಳಿತ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿ ಹೋರಾಟ ರೂಪಿಸಬೇಕು ಎಂದರು.ಮಾಜಿ ಸಚಿವೆ ಸುಮಾವಸಂತ್, ಜಿ.ಪಂ.ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ವಿಧಾನ ಪರಿಷತ್ ಸದಸ್ಯ ಟಿ.ಜಾನ್, ವಿಧಾನ ಪರಿಷತ್‌ನ ಮಾಜಿ ಸದಸ್ಯ ಸಿ.ಎಸ್.ಅರುಣ್‌ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ.ಪ್ರದೀಪ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕುಮುದಾ ಧರ್ಮಪ್ಪ, ಪ.ಪಂ.ಅಧ್ಯಕ್ಷೆ ಎಸ್.ಪಿ.ಚರಿತಾ ಮತ್ತಿತರರು ಇದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)