`ಕಾಂಗ್ರೆಸ್, ಬಿಜೆಪಿಗೆ ಅಧಿಕಾರ ಅಸಾಧ್ಯ'

7

`ಕಾಂಗ್ರೆಸ್, ಬಿಜೆಪಿಗೆ ಅಧಿಕಾರ ಅಸಾಧ್ಯ'

Published:
Updated:

ರಾಯಚೂರು: ಕೇಂದ್ರದಲ್ಲಿ  ಕಾಂಗ್ರೆಸ್ ಹಾಗೂ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುವುದು ಅಸಾಧ್ಯ. ಪ್ರಾದೇಶಿಕ ಪಕ್ಷಗಳ ನೆರವಿನೊಂದಿಗೆ ಅಧಿಕಾರಕ್ಕೆ ಬರಬಹುದು ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವಗೌಡ ಅವರು ಬುಧವಾರ ಇಲ್ಲಿ ಹೇಳಿದರು.ತೃತೀಯ ರಂಗದ ಕಟ್ಟಲು ತಮ್ಮಿಂದ ಸಾಧ್ಯವಾಗುತ್ತಿಲ್ಲ. ತೃತೀಯ ರಂಗ ರಚನೆಗೆ ಪ್ರಾದೇಶಿಕ ಪಕ್ಷಗಳು ಮುಂದೆ ಬಂದಲ್ಲಿ ಜೆಡಿಎಸ್ ಪಕ್ಷವು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಇದೇ ಶುಕ್ರವಾರ ಪ್ರಧಾನಮಂತ್ರಿ ಕರೆದಿರುವ ಕಾವೇರಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ  ಸರ್ಕಾರ ಕೈಗೊಳ್ಳಬೇಕಾದ ನಿಲುವುಗಳ ಬಗ್ಗೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ತಿಳಿಸಲಾಗಿದೆ. ಅಲ್ಲದೇ  ಆ ಭಾಗದ ರೈತರ ಹಿತದೃಷ್ಟಿ ಕುರಿತು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಿದರೆ ಅದಕ್ಕೆ ಜೆಡಿಎಸ್ ಪಕ್ಷವು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಬೆಳಗಾವಿ ಅಧಿವೇಶನಲ್ಲಿ ಅವಿಶ್ವಾಸ ಮಂಡನೆ ಕುರಿತು ಕಾಂಗ್ರೆಸ್ ಪಕ್ಷವು ಯಾವುದೇ ರೀತಿಯಲ್ಲಿ ಪ್ರಶ್ನಿಸಿಲ್ಲ ಎಂದು ಹೇಳಿದರು.

ಮಾಜಿ ಸಚಿವರಾದ ಎಂ.ಎಸ್ ಪಾಟೀಲ್, ರಾಜಾ ಅಮರೇಶ್ವರ ನಾಯಕ, ಜಿಲ್ಲಾಧ್ಯಕ್ಷ ಮಹಾಂತೇಶ ಪಾಟೀಲ ಅತ್ತನೂರು ಸುದ್ದಿಗೋಷ್ಠಿಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry