ಮಂಗಳವಾರ, ಏಪ್ರಿಲ್ 13, 2021
25 °C

ಕಾಂಗ್ರೆಸ್ ಮುಖಂಡರ ಬಿಜೆಪಿ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ‘ಕ್ಷೇತ್ರದ ಗ್ರಾಮ ಪಂಚಾಯಿತಿಗಳ  ವ್ಯಾಪ್ತಿಯಲ್ಲಿ 5000 ಆಶ್ರಯ ನಿವೇಶನಗಳನ್ನು ವಿತರಿಸಲು ಜಾಗ ಮೀಸಲಿರಿಸಲಾಗಿದೆ. ಗ್ರಾಮ ಪಂಚಾಯಿತಿಯಿಂದ ನಿಜವಾದ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿಕೊಟ್ಟರೆ ನಿವೇಶನಗಳನ್ನು ನೀಡಲಾಗುವುದು’ ಎಂದು  ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.ಸಿಂಗನಾಯಕನ ಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ಮುಖಂಡರನ್ನು ಸ್ವಾಗತಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.ಕಾಂಗ್ರೆಸ್ ಮುಖಂಡ ಹೇಮಂತಕುಮಾರ್, ರಾಜು, ಗಾ.ಪಂ.ಸದಸ್ಯರಾದ ಆರೋಗ್ಯಸ್ವಾಮಿ, ಮುನಿಯಪ್ಪ, ಪವಿತ್ರ, ಜಯಲಕ್ಷ್ಮಮ್ಮ ಸೇರಿದಂತೆ 38 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.ಜಿ.ಪಂ.ಸದಸ್ಯರಾದ ವಾಣಿಶ್ರೀ ವಿಶ್ವನಾಥ್, ಕೆ.ಎಂ.ಮಾರೇಗೌಡ ,ತಾ.ಪಂ. ಸದಸ್ಯರಾದ ರಾಮಚಂದ್ರಪ್ಪ, ಮಲ್ಲಣ್ಣ, ರಾಮಣ್ಣ, ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮಮ್ಮ, ಬಿಜೆಪಿ ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಉಪಾಧ್ಯಕ್ಷ ಮೂರ್ತಿ ಕೂರ್ಲಪ್ಪ, ಬೆಂಗಳೂರು ಹಾಲು ಒಕ್ಕೂಟದ ಉತ್ತರ ತಾಲ್ಲೂಕು ನಿರ್ದೇಶಕ ದಿಬ್ಬೂರು ಜಯಣ್ಣ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.