ಬುಧವಾರ, ಮೇ 12, 2021
18 °C

ಕಾಂಗ್ರೆಸ್: ಮುಗಿದ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 16ರಿಂದ ನಡೆದ 25 ಸಾವಿರ ಯುವ ಕಾಂಗ್ರೆಸ್‌ನ ಬೂತ್ ಸಮಿತಿಗಳ ಚುನಾವಣೆ ಬುಧವಾರ ಅಂತ್ಯಗೊಂಡಿತು. ವಿಧಾನಸಭೆ, ಲೋಕಸಭೆ ಮತ್ತು ಪ್ರದೇಶ ಯುವ ಕಾಂಗ್ರೆಸ್ ಸಮಿತಿಗಳಿಗೆ ಚುನಾವಣೆ ನಡೆಯುವುದು ಬಾಕಿ ಇದ್ದು, ಇದೇ 25ಕ್ಕೆ ನಾಮಪತ್ರ ಸಲ್ಲಿಸಬೇಕಾಗಿದೆ.26ರಂದು ನಾಮಪತ್ರಗಳ ಪರಿಶೀಲನೆ ಮತ್ತು ಚಿಹ್ನೆ ನೀಡಲಾಗುತ್ತದೆ. ಅದರ ನಂತರ ಅಕ್ಟೋಬರ್ 12 ಮತ್ತು 13ರಂದು ಚುನಾವಣೆ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಡುತ್ತಿದ್ದು, ಲಾಟರಿ ಮೂಲಕ ಕ್ಷೇತ್ರಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಕೆಲಸ ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ.ಶ್ರೀನಿವಾಸ್ ಗೆಲುವು: ಡಿ.ಕೆ.ಶಿವಕುಮಾರ್ ಬೆಂಬಲಿತ ಶ್ರೀನಿವಾಸ್ ಅವರು ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಕಮಿಟಿಯಿಂದ ಆಯ್ಕೆಯಾಗಿದ್ದು, ಅವರೂ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.