ಬುಧವಾರ, ಏಪ್ರಿಲ್ 14, 2021
25 °C

ಕಾಂಗ್ರೆಸ್ ಸಂಸದನ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಣ್ಣೂರು (ಕೇರಳ) (ಪಿಟಿಐ):  ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಬೆದರಿಕೆ ಮತ್ತು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಕೆ. ಸುಧಾಕರನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಯುವ ಕಾಂಗ್ರೆಸ್ ಅಧ್ಯಕ್ಷ ರಾಗೇಶ್ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ವಲ್ಲಪಟ್ಟಿನಂ ಪೊಲೀಸ್ ಠಾಣೆ ಎದುರು ಕೆ. ಸುಧಾಕರನ್, ಶಾಸಕ ಕೆ. ಎಂ. ಶಾಜಿ ಮತ್ತು ಪಕ್ಷದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸುಧಾಕರನ್ ಅವರು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡಚಣೆ ಉಂಟುಮಾಡಿದ್ದಲ್ಲದೆ, ಇನ್ಸ್‌ಪೆಕ್ಟರ್‌ಗೆ ಬೆದರಿಕ ಹಾಕಿದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದಕ್ಕೂ ಮುನ್ನ ಆಜ್ಞೆಯನ್ನು ಉಲ್ಲಂಘಿಸಿ ಮರಳು ಸಾಗಣೆ ಮಾಡುತ್ತಿದ್ದ ರಾಗೇಶ್‌ನ ಸಹಚರರನ್ನು ಪೊಲೀಸರು ಬಂಧಿಸಿದ್ದರು. ಇದರ ಬಗ್ಗೆ ವಿಚಾರಿಸಲು ಹೋದ ರಾಗೇಶ್ ಅವರನ್ನು ಪೊಲೀಸರು ನಂತರ ವಶಕ್ಕೆ ಪಡೆದಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.